ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರಿಗೆ 1 ವಾರ ಕ್ವಾರೆಂಟೈನ್‍ ಕಡ್ಡಾಯ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 23- ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ನಿಯಂತ್ರಿಸಲು ಹೊರ ರಾಜ್ಯಗಳಿಂದ ಆಗಮಿಸುವವರಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಇನ್ನು ಮುಂದೆ ಒಂದು ವಾರಗಳ ಕಾಲ ಕಡ್ಡಾಯವಾಗಿ ಕ್ವಾರೆಂಟೈನ್‍ಗೆ ಒಳಪಡಬೇಕು.

ಕೆಲವು ರಾಜ್ಯಗಳಲ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಹಾಗಾಗಿ ಸೇವಾಸಿಂಧು ಅಡಿ ಟಿಕೆಟ್ ಬುಕ್ ಮಾಡುವವರಿಗೆ ಕೆಲವು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ ಎಂದು ನೂತನ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಲಾಗಿದೆ.

ಕೊರೊನಾ ಸೋಂಕು ಹೆಚ್ಚಿರುವ ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ದೆಹಲಿ, ರಾಜಸ್ಥಾನ ಹಾಗೂ ಮಧ್ಯಪ್ರದೇಶದಿಂದ ಬರುವವರು ಒಂದು ವಾರ ಕಡ್ಡಾಯ ಕ್ವಾರಂಟೈನ್‍ನಲ್ಲಿರಲೇಬೇಕು. ಆರೋಗ್ಯ ಇಲಾಖೆ ಸೂಚಿಸಿರುವ ಹೊಟೇಲ್ ಅಥವಾ ಸಮುದಾಯ ಭವನಗಳಲ್ಲಿ ಕ್ವಾರಂಟೈನ್ ಆಗಲೇಬೇಕು.

5-7ನೆ ದಿನದ ಮಧ್ಯೆ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆ ಮಾಡಲಾಗುವುದು.
ಉಳಿದ ರಾಜ್ಯಗಳಿಂದ ಬಂದವರಿಗೆ ಕೇವಲ ಹೋಂ ಕ್ವಾರಂಟೈನ್ ಮಾತ್ರ ಎಂದು ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.

ಕೋವಿಡ್ ಪಾಸಿಟಿವ್ ಬಂದು ಆಸ್ಪತ್ರೆಗೆ ದಾಖಲಾದ ರೋಗಿ 10 ದಿನವಾದರೂ ರೋಗ ಲಕ್ಷಣ ಕಾಣಿಸದಿದ್ದರೆ ಮಾತ್ರ ಈ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ. ಒಂದು ವೇಳೆ ರೋಗಿಗೆ ಮನೆಯಲ್ಲಿ ಕ್ವಾರಂಟೈನ್ ಆಗಲು ಸೂಕ್ತ ಸೌಲಭ್ಯ ಇಲ್ಲದಿದ್ದರೆ ಅಂಥವರಿಗೆ ಸರ್ಕಾರವೇ ಬದಲಿ ವ್ಯವಸ್ಥೆ ಮಾಡಲು ಸಿದ್ಧವಿದೆ.

ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ. ಆರೋಗ್ಯ ಇಲಾಖೆಯ ಅಕಾರಿಗಳು ಸಾಧಕ-ಬಾಧಕಗಳನ್ನು ಅವಲೋಕಿಸುತ್ತಿದ್ದಾರೆ.
ಇದೇ ವೇಳೆ, ಹೆಚ್ಚಿನ ಸೋಂಕು ಹಬ್ಬಿರುವ ರಾಜ್ಯಗಳನ್ನು ಬಿಟ್ಟು ಬೇರೆ ಕಡೆಯಿಂದ ಬಂದ ವ್ಯಕ್ತಿಗಳನ್ನು ಹೋಟೆಲ್ ಬದಲು ಅವರ ಮನೆಯಲ್ಲೇ ಕ್ವಾರಂಟೈನ್‍ಗೆ ಒಳಪಡಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ದೆಹಲಿ, ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳನ್ನು ಅತೀ ಸೂಕ್ಷ್ಮ ರಾಜ್ಯಗಳೆಂದು ಕೇಂದ್ರ ಸರ್ಕಾರವೇ ಪಟ್ಟಿ ಮಾಡಿ ಬಿಡುಗಡೆ ಮಾಡಿದೆ.

ಈ ಆರು ರಾಜ್ಯಗಳಿಂದ ಬಂದವರನ್ನು 7 ದಿನ ಹೊಟೇಲ್ ಕ್ವಾರಂಟೈನ್ ಮತ್ತು 7 ದಿನ ಹೋಮ್ ಕ್ವಾರಂಟೈನ್‍ನಲ್ಲಿಡಲು ನಿರ್ಧರಿಸಲಾಗಿದೆ. ಉಳಿದ ರಾಜ್ಯಗಳಿಂದ ಬಂದವರು ನೇರವಾಗಿ ತಮ್ಮ ಮನೆಗೆ ಹೋಗಿ ಅಲ್ಲಿಯೇ ಕಡ್ಡಾಯವಾಗಿ ಕ್ವಾರಂಟೈನ್‍ಗೆ ಒಳಪಡಬೇಕಾಗುತ್ತದೆ.

ಈ ರಾಜ್ಯಗಳಿಂದ ಬಂದ 60 ವರ್ಷ ಮೇಲ್ಪಟ್ಟ ವಯೋವೃದ್ಧರು, 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ವಿನಾಯಿತಿ ನೀಡಲಾಗಿದೆ. ಇವರು ಹೊಟೇಲ್ ಬದಲು ತಮ್ಮ ಮನೆಗೆ ನೇರವಾಗಿ ಹೋಗಿ ಕ್ವಾರಂಟೈನ್‍ಗೆ ಒಳಪಡಲು ಅವಕಾಶ ನೀಡಲಾಗಿದೆ.

ಇನ್ನು ಏಳು ದಿನ ಹೋಟೆಲ್ ಕ್ವಾರಂಟೈನ್ನಲ್ಲಿದ್ದವರಿಗೆ 5ನೇ ದಿನದಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಪರೀಕ್ಷೆಯ ರಿಸಲ್ಟ್ ಆಧರಿಸಿ ಅವರನ್ನು ಬಿಡುಗಡೆ ಮಾಡಲಾಗುತ್ತದೆ. ಒಂದು ವೇಳೆ ಪಾಸಿಟಿವ್ ಬಂದರೆ ಅವರನ್ನು ನೇರವಾಗಿ ಆಸ್ಪತ್ರೆಗೆ ದಾಖಲಿಸಲಾಗುತ್ತದೆ.

ಇದೇ ವೇಳೆ ದೇಶೀಯ ವಿಮಾನಗಳಲ್ಲಿ ಪ್ರಯಾಣಿಸಿ ಕರ್ನಾಟಕಕ್ಕೆ ಆಗಮಿಸುವವರನ್ನು ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಪಡಿಸಿ ನಂತರ ಮನೆಯಲ್ಲಿ ಕ್ವಾರಂಟೈನ್‍ಗೆ ಒಳಪಡಿಸಲಾಗುವುದು ಎಂದು ರಾಜ್ಯ ಪೆÇಲೀಸ್ ಮಹಾ ನಿರ್ದೇಶಕರು(ಡಿಜಿಪಿ)ಆದೇಶ ಹೊರಡಿಸಿದ್ದಾರೆ.

ಈ ಆದೇಶ ಕೊರೊನಾ ಹೆಚ್ಚು ಬಾಸುತ್ತಿರುವ ರಾಜ್ಯಗಳಿಂದ ಆಗಮಿಸುವ ಪ್ರಯಾಣಿಕರಿಗೆ ಮಾತ್ರ ಅನ್ವಯಸಲಿದೆ. ಕೊರೊನಾದಿಂದ ಬಾಸುತ್ತಿರುವ ಮಹಾರಾಷ್ಟ್ರ, ರಾಜಸ್ಥಾನ, ದೆಹಲಿ, ಗುಜರಾತ್, ತಮಿಳುನಾಡು, ದೆಹಲಿ ಮತ್ತು ಮಧ್ಯಪ್ರದೇಶ ದಿಂದ ಬೆಂಗಳೂರು ಹಾಗೂ ಇತರೆಡೆಗಳಿಗೆ ಆಗಮಿಸುವ ಪ್ರಯಾಣಿಕರಿಗೆ ಈ ಆದೇಶ ಅನ್ವಯವಾಗಲಿದೆ ಎಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

Facebook Comments

Sri Raghav

Admin