10ನೇ ಮಹಿಳಾ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಲೀಲಾದೇವಿ ಆರ್.ಪ್ರಸಾದ್ ಆಯ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

eladevi

ಬೆಂಗಳೂರು, ಆ.15- ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಡಾ.ಲೀಲಾದೇವಿ ಆರ್.ಪ್ರಸಾದ್ ಅವರನ್ನು 10ನೆ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಹಿಳಾ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಸಮ್ಮೇಳನವು ಸೆ.10 ಮತ್ತು 11ನೆ ಜೆ.ಸಿ.ರಸ್ತೆಯ ಸರ್ ಪುಟ್ಟಣ್ಣ ಶೆಟ್ಟಿ ಪುರಭವನ (ಟೌನ್‍ಹಾಲ್)ನಲ್ಲಿ ನಡೆಯಲಿದೆ.  ಡಾ.ಲೀಲಾದೇವಿ ಆರ್.ಪ್ರಸಾದ್ ಅವರು ನಾಡು-ನುಡಿಗಳ ಶ್ರೇಯಸ್ಸಿಗಾಗಿ ತಮ್ಮನ್ನು ಸಮರ್ಪಿಸಿಕೊಂಡು ಸತತ ಪರಿಶ್ರಮಗಳಿಂದ ಪ್ರಾಮಾಣಿಕವಾಗಿ ದುಡಿದು ರಾಜಕೀಯ, ಸಾಮಾಜಿಕ ಹಾಗೂ ಸಾಹಿತ್ಯಕ ಕ್ಷೇತ್ರಗಳಲ್ಲಿ ಕೀರ್ತಿಯ ಶಿಖರವನ್ನೇರಿದವರು. ತಮ್ಮ 23ನೆ ವಯಸ್ಸಿನಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ ಸದಸ್ಯೆಯಾಗಿ, ಬೆಂಗಳೂರು ನಗರ ಜಿಲ್ಲಾ ಸಗಟು ಸಹಕಾರ ಸಂಸ್ಥೆಯ ಚುನಾಯಿತ ಪ್ರಥಮ ಮಹಿಳಾ ಅಧ್ಯಕ್ಷಿಣಿಯಾಗಿ, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷೆಯಾಗಿ ಲೋಕ ಮೆಚ್ಚುವಂತೆ ಸೇವೆ ಸಲ್ಲಿಸಿದರು. 1985ರಲ್ಲಿ ವಿಧಾನಸಭೆಗೆ ಚುನಾಯಿತರಾಗಿ ಪ್ರಾಥಮಿಕ, ಪ್ರೌಢಶಿಕ್ಷಣ ಹಾಗೂ ವಾರ್ತಾ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು.

ಸ್ತ್ರೀ ಸ್ವಾತಂತ್ರ್ಯ ಸಮಾನತೆಗಳನ್ನು ಕುರಿತು ಚಿಂತಿಸುವ, ತಮ್ಮ ಅನುಭವ ಅನಿಸಿಕೆ ಚಿಂತನೆಗಳನ್ನು ನಿರ್ಭಿಡೆಯಿಂದ ಅಭಿವ್ಯಕ್ತಿಸಲು ಅವಕಾಶ ಕಲ್ಪಿಸುವ ಉದ್ದೇಶ ಈ ಸಮ್ಮೇಳನ ಆಯೋಜನೆಯ ಹಿಂದಿದೆ. ಉದ್ಘಾಟನೆ, ವಿಚಾರಗೋಷ್ಠಿ, ಕವಿಗೋಷ್ಠಿ, ಸಂವಾದ, ಚರ್ಚೆ, ಗಾಯನ, ನೃತ್ಯ, ಮೆರವಣಿಗೆ, ಸನ್ಮಾನ ಈ ಎಲ್ಲದರಲ್ಲೂ ಮಹಿಳೆಯರೇ ಮುಂಚೂಣಿಯಲ್ಲಿರುವಂತೆ ಕಾರ್ಯಕ್ರಮವನ್ನು ರೂಪಿಸಲಾಗಿದೆ. ಸಾಂಸ್ಕøತಿಕ ಮತ್ತು ಮನರಂಜನೆಯ ಕಾರ್ಯಕ್ರಮಗಳಲ್ಲೂ ಮಹಿಳೆಯರದೇ ಪ್ರಮುಖ ಪಾತ್ರವಿರುತ್ತದೆ. ಸೆ.10ರಂದು ಬೆಳಗ್ಗೆ ಮೈಸೂರು ರಸ್ತೆಯ ಸಿರ್ಸಿ ವೃತ್ತದಿಂದ ಪುಟ್ಟಣ್ಣ ಶೆಟ್ಟಿ ಪುರಭವನದವರೆಗೆ ವಿವಿಧ ಕಲಾ ತಂಡಗಳಿಂದ ಕೂಡಿದ, ಕನ್ನಡದ ಶಕ್ತಿಯನ್ನು ಬಿಂಬಿಸುವ ಬೃಹತ್ ಮೆರವಣಿಗೆ, ಸಮ್ಮೇಳನ ಉದ್ಘಾಟನೆ, ವಿಚಾರಗೋಷ್ಠಿ, ಕವಿಗೋಷ್ಠಿ, ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿದೆ.

11ರಂದು ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಸನ್ಮಾನ, ವಿಚಾರಗೋಷ್ಠಿ, ಬಹಿರಂಗ ಅಧಿವೇಶನ, ಸಮಾರೋಪ. ಸಾಂಸ್ಕøತಿಕ ಕಾರ್ಯಕ್ರಮಗಳು… ಈ ರೀತಿಯಲ್ಲಿ ಹಿಂದಿನ ಸಮ್ಮೇಳನಗಳಿಗಿಂತ ಭಿನ್ನವಾಗಿ, ವೈಶಿಷ್ಟ್ಯಪೂರ್ಣವಾಗಿ ಬೆಂಗಳೂರು ನಗರ ಜಿಲ್ಲಾ 10ನೆ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ.

► Follow us on –  Facebook / Twitter  / Google+

Facebook Comments

Sri Raghav

Admin