10ರಂದು ಟಿಪ್ಪು ಜಯಂತಿ ನಿಶ್ಚಿತ, ಶಾಂತಿಗೆ ಭಂಗ ಮಾಡಿದರೆ ಕಠಿಣ ಕ್ರಮ : ಪರಮೇಶ್ವರ್ ಎಚ್ಚರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Parameshwar
ಶಿವಮೊಗ್ಗ, ನ.2-ಸರ್ಕಾರ ಇದೇ 10 ರಂದು ಟಿಪ್ಪು ಜಯಂತಿ ಆಚರಿಸುವುದು ಖಂಡಿತ. ಸರ್ಕಾರದ ತೀರ್ಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ಒಂದು ವೇಳೆ ಯಾವುದೇ ಸಂಘಟನೆ ವಿರೋಧಿಸಿದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಪ್ಪು ಜಯಂತಿಗೆ ಪರ-ವಿರೋಧ ಸಾಮಾನ್ಯ. ಆದರೆ ಸರ್ಕಾರ ಈಗಾಗಲೇ ಒಂದು ವರ್ಷ ಟಿಪ್ಪು ಜಯಂತಿಯನ್ನು ಆಚರಿಸಿದೆ. ಹಾಗಾಗಿ ಸರ್ಕಾರದ ತೀರ್ಮಾನದಲ್ಲಿ ಯಾವುದೇ ಬದಲಾವಣೆ ಆಗದು. ಯಾವುದೇ ಸಂಘಟನೆ ಕಾನೂನು ಮೀರಿ ಜಯಂತಿ ವಿರೋಧಿಸಿದರೆ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು.

ಆರ್‍ಎಸ್‍ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಅಪರಾಧಿಗಳನ್ನು ಬಂಧಿಸಲಾಗಿದೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಯಾವುದೇ ಸಂಘಟನೆ ಕಾನೂನು ಮೀರಿ ವರ್ತಿಸಿದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.ಭಯೋತ್ಪಾದನೆ ತಡೆಯಲು ಗರುಡಾ ಪೋ ರ್ಸ್ ರಚಿಸಿದ್ದೇವೆ. 150 ಜನ ಕಮಾಂಡರ್‍ಗಳನ್ನು ಸಿದ್ಧಪಡಿಸಿದ್ದೇವೆ. ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆ ತಡೆಯಲು ನಮ್ಮ ಪಡೆ ಸದಾ ಸಿದ್ಧವಿರುತ್ತದೆ. ಬಿಜೆಪಿ ಅಧಿಕಾರದಲ್ಲಿದ್ದ ಸಂದರ್ಭಕ್ಕಿಂತ ಈಗ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ. ಕಾನೂನು ಪಾಲಿಸದವರನ್ನು ನಾವು ಸುಮ್ಮನೆ ಬಿಡುವುದಿಲ್ಲ ಎಂದು ತಿಳಿಸಿದರು.

 

► Follow us on –  Facebook / Twitter  / Google+

Facebook Comments

Sri Raghav

Admin