ಆಗ್ರ-ಮೊರಾದಾಬಾದ್ ಹೆದ್ದಾರಿಯಲ್ಲಿ ಭೀಕರ ಅಪಘಾತ, 10 ಮಂದಿ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಮೊರಾದಾಬಾದ್, ಜ.30- ದಟ್ಟವಾಗಿ ಕವಿದಿದ್ದ ಮಂಜಿನಿಂದಾಗಿ ರಸ್ತೆ ಸರಿಯಾಗಿ ಕಾಣದೆ ಟ್ರಕ್ ಹಾಗೂ ಬಸ್ ನಡುವಿನ ಭೀಕರ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್-ಆಗ್ರ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಇಂದು ಮುಂಜಾನೆ ಹೆದ್ದಾರಿಯಲ್ಲಿ ದಟ್ಟವಾದ ಮಂಜು ಕವಿದಿತ್ತು. ಹೀಗಾಗಿ ರಸ್ತೆ ಅಸ್ಪಷ್ಟವಾಗಿ ಕಾಣುತ್ತಿದ್ದವು. ಈ ಸಂದರ್ಭದಲ್ಲಿ ಬಸ್ ಮತ್ತು ಟ್ರಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ.

ಮತ್ತೊಂದು ವಾಹನ ಅಪಘಾತಕ್ಕೆ ಸಿಲುಕಿದ್ದು, ಮೂರು ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಸ್ಥಳದಲ್ಲೇ 10ಮಂದಿ ಸಾವನ್ನಪ್ಪಿದರೆ, 25 ಮಂದಿ ಗಾಯಗೊಂಡಿದ್ದು, ಅವರಲ್ಲಿ ಬಹುತೇಕರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಅಕಾರಿಗಳು ತಿಳಿಸಿದ್ದಾರೆ.

ಏಕಕಾಲಕ್ಕೆ ಮೂರು ವಾಹನಗಳು ಪರಸ್ಪರ ಅಪ್ಪಳಿಸಿದ್ದರಿಂದ ಅಪಘಾತದ ಪ್ರಮಾಣ ಭೀಕರವಾಗಿತ್ತು ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಲಾ ಎರಡು ಲಕ್ಷ ರೂ., ಗಾಯಾಳುಗಳಿಗೆ ತಲಾ 50ಸಾವಿರ ರೂ. ಪರಿಹಾರ ಮತ್ತು ವೈದ್ಯಕೀಯ ವೆಚ್ಚ ಭರಿಸುವುದಾಗಿ ಘೋಷಣೆ ಮಾಡಿದ್ದಾರೆ.

Facebook Comments

Sri Raghav

Admin