100ಕ್ಕೂ ಹೆಚ್ಚು ಜನರು ಬಲಿಯಾದ ಇಂಡೋನೆಷ್ಯಾದಲ್ಲಿ ಮತ್ತೆ ಭೂನಡುಕ

ಈ ಸುದ್ದಿಯನ್ನು ಶೇರ್ ಮಾಡಿ

Indonasia-Earthquake

ಬಾಂಡಾಏಸ್, ಡಿ.8-ನೂರಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡ ನಂತರ ಇಂಡೋನೆಷ್ಯಾದ ಸುಮಾತ್ರ ದ್ವೀಪದ ಬಾಂಡಾ ಏಸ್ ಪ್ರಾಂತ್ಯದಲ್ಲಿ ಇಂದು ಬೆಳಿಗ್ಗೆ ಮತ್ತೆ ಮತ್ತೆ ಭೂಮಿ ಕಂಪಿಸಿದ್ದು ಜನರು ಮತ್ತಷ್ಟು ಭಯಭೀತರಾಗಿದ್ದಾರೆ. ನಿನ್ನೆ ಸಂಭವಿಸಿದ ವಿನಾಶಕಾರಿ ಭೂಕಂಪದಲ್ಲಿ 100ಕ್ಕೂ ಹೆಚ್ಚು ಮಂದಿ ಮೃತಪಟ್ಟು, ನೂರಾರು ಜನರು ಗಾಯಗೊಂಡಿದ್ದರು. ಉರುಳಿಬಿದ್ದ ನೂರಾರು ಕಟ್ಟಡಗಳ ಭಗ್ನಾವಶೇಷಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿದಿದೆ. ಭೀಕರ ಭೂಕಂಪದಿಂದ ಸಂತ್ರಸ್ತಗೊಂಡಿರುವ ಜನರಿಗೆ ಔಷಧೋಪಚಾರ ಮತ್ತು ಅಗತ್ಯ ಸಾಮಗ್ರಿಗಳನ್ನು ಒದಗಿಸಲು ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin