100ಕ್ಕೂ ಹೆಚ್ಚು ರಜನಿ ಅಭಿಮಾನಿಗಳ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Rajnikant-01

ಚೆನ್ನೈ, ಮೇ 23-ಖ್ಯಾತ ಚಿತ್ರ ನಟ ರಜನಿಕಾಂತ್ ರಾಜಕೀಯ ರಂಗಕ್ಕೆ ಧುಮುಕುವ ಮುನ್ನವೇ ತಮಿಳುನಾಡಿನಲ್ಲಿ ಪರ ಮತ್ತು ವಿರೋಧ ಪ್ರತಿಭಟನೆಗಳು ತೀವ್ರಗೊಂಡಿವೆ. ತಲೈವಾ ರಾಜಕೀಯಕ್ಕೆ ಬರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ತಮಿಳ್ ಮುನ್ನೇತ್ರ ಪದೈ ವಿರುದ್ಧ ರಜನಿ ಅಭಿಮಾನಿಗಳು ತಿರುಗಿ ಬಿದ್ದಿದ್ದಾರೆ. ಇಂದು ಚೆನ್ನೈನಲ್ಲಿ ಭಾರೀ ಪ್ರತಿಭಟನೆ ನಡೆಸಿದ 100ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.



ರಜನಿಕಾಂತ್ ರಾಜಕೀಯ ಪ್ರವೇಶಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಘೋಷಣೆ ಕೂಗುತ್ತಾ ಇಂದು ಪ್ರತಿಭಟನೆ ನಡೆಸಿದ ಅಭಿಮಾನಿಗಳು, ತಮಿಳ್ ಮುನ್ನೇತ್ರ ಪದೈನ ನಾಯಕಿ ವೀರಲಕ್ಷ್ಮಿ ಅವರ ಪ್ರತಿಕೃತಿ ದಹನ ಮಾಡಲು ಯತ್ನಿಸಿದರು. ಇದಕ್ಕೆ ಪೊಲೀಸರು ಅಡ್ಡಿ ಉಂಟು ಮಾಡಿದಾಗ ಅಭಿಮಾನಿಗಳು ವಾಗ್ವಾದಕ್ಕೆ ಇಳಿದರು. ಪ್ರತಿಭಟನಾನಿರತರನ್ನು ನಿಯಂತ್ರಿಸಲು ಪೊಲೀಸರು ಹರಸಾºಸ ಮಾಡಬೇಕಾಯಿತು. ಕಾನೂನು ಉಲ್ಲಂಘಿಸಿದ ಆರೋಪದ ಮೇಲೆ 100ಕ್ಕೂ ಹೆಚ್ಚು ಅಭಿಮಾನಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ವಿವಿಧ ನಗರಗಳಲ್ಲೂ ತಲೈವಾಗೆ ಬೆಂಬಲ ಸೂಚಿಸಿ ಅಸಂಖ್ಯಾತ ಮಂದಿ ಮೆರವಣಿಗೆ ಮತ್ತು ಸಭೆಗಳನ್ನು ನಡೆಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin