`100′ ಸಿನಿಮಾ ವೀಕ್ಷಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.18- ನಟ ಹಾಗೂ ನಿರ್ದೇಶಕ ರಮೇಶ್ ಅರವಿಂದ್ ನಿರ್ದೇಶನದ 100 ಸಿನಿಮಾವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವೀಕ್ಷಿಸಿದರು. ಸಿಒಡಿ ಡಿಜಿ ಹಾಗೂ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕೂಡ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸಿನಿಮಾ ನೋಡಿ ಬಹಳ ಸಂತೋಷವಾಯಿತು. ಸೋಷಿಯಲ್ ಮೀಡಿಯಾದಲ್ಲಿ ಯುವ ಜನಾಂಗ ಮುಳಗಿರುತ್ತದೆ. ಇದರಿಂದ ಏನೆಲ್ಲ ತೊಂದರೆ ಆಗುತ್ತದೆ ಎಂಬುದನ್ನು ಬಹಳ ಚೆನ್ನಾಗಿ ನಿರ್ದೇಶನ ಮಾಡಿದ್ದಾರೆ. ಸಿನಿಮಾ ಮನರಂಜನೆಯನ್ನಷ್ಟೇ ಅಲ್ಲ, ಅಪರಾಧ ಜಗತ್ತನ್ನು ಮಟ್ಟ ಹಾಕಲು ಬಹಳ ಸಹಕಾರಿಯಾಗಲಿ ಎಂದು ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟರು.

ಸಾಮಾಜಿಕ ಜಾಲತಾಣದಿಂದ ಯುವ ಜನಾಂಗ ಹೇಗೆ ಸಮಸ್ಯೆಗಳಿಗೆ ಸಿಲುಕಿಕೊಳ್ಳುತ್ತದೆ ಎಂಬುದನ್ನು 100 ಸಿನಿಮಾದಲ್ಲಿ ಬಹಳ ಚೆನ್ನಾಗಿ ತೋರಿಸಿದ್ದಾರೆ. ಸಾಮಾಜಿಕ ಜಾಲತಾಣ ಒಂದು ವರವಾಗಿದೆ. ಆದರೆ, ಅದನ್ನು ಶಾಪವಾಗಿ ಮಾಡಬೇಡಿ ಎಂದರು.
ಸೈಬರ್ ಕ್ರೈಮ್ ಅಕಾರಿಗಳು ಸಹ ಈ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Facebook Comments