ನಾಳೆಯಿಂದ ಐದು ದಿನ 100 ನಾಟೌಟ್ ಪ್ರತಿಭಟನೆಗೆ ಕಾಂಗ್ರೆಸ್ ಸಿದ್ಧತೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಳೂರು, ಜೂ.10- ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ವಿರುದ್ಧ ಬೀದಿಗಿಳಿಯಲು ನಿರ್ಧರಿಸಿರುವ ಕಾಂಗ್ರೆಸ್ ಗ್ರಾಮ ಪಂಚಾಯತ್ ಮಟ್ಟದಿಂದಲೂ100 ನಾಟೌಟ್ ಪ್ರತಿಭಟನೆ ನಡೆಸಲು ಮುಂದಾಗಿದೆ. ನಾಳೆಯಿಂದ ಐದು ದಿನದಲ್ಲಿ ಐದು ಸಾವಿರ ಪ್ರತಿಭಟನೆಗಳನ್ನು ಆಯೋಜಿಸಲಾಗಿದೆ.

ಕೋವಿಡ್-100 ಮಹಾಮಾರಿಯ ಹಿಡಿತಕ್ಕೆ ಸಿಲುಕಿ ಜನಸಾಮಾನ್ಯರು ಹೈರಾಣಾಗಿರುವ ದುಸ್ಥಿತಿಯ ನಡುವೆ ಸಂವೇದನಾರಹಿತವಾಗಿ ಕೇಂದ್ರ ಸರ್ಕಾರ ದಿನೇ ದಿನೇ ಪೆಟ್ರೋಲ್, ಡೀಸೆಲ್ ಬೆಲೆಯನನ್ನು ಏರಿಕೆ ಮಾಡುತ್ತಲೇ ಇದೆ. ಬಹಳಷ್ಟು ಕಡೆ ಲೀಟರ್ ಒಂದರ ಬೆಲೆ ನೂರು ರೂಪಾಯಿ ಗಡಿ ದಾಟಿದೆ. ಇನ್ನುಳಿದ ಕಡೆ ನೂರು ರೂಪಾಯಿ ಹೋಸ್ತಿಲಿನಲ್ಲಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಮನೆ ಬಳಕೆ ಹಾಗೂ ದೈನಂದಿನ ಜೀವನಾವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರುತ್ತಿವೆ. ಕಳೆದ 13 ತಿಂಗಳಿನಲ್ಲಿ ಪೆಟ್ರೋಲ್ 25.72 ರೂ. ಡೀಸೆಲ್ 23.93 ರೂಪಾಯಿಗೆ ಹೆಚ್ಚಾಗಿದೆ. ಕಳೆದ ಐದು ತಿಂಗಳಿನಲ್ಲಿ 43 ಬಾರಿ ದರಗಳನ್ನು ಹೆಚ್ಚಿಸಲಾಗಿದೆ. ಇದು ಕೇಂದ್ರ ಸರ್ಕಾರದ ಕೃಪಾಪೋಷಿತ ಲೂಟಿ ಎಂದು ಕಾಂಗ್ರೆಸ್ ಕಿಡಿಕಾರಿದೆ.

ದರ ಏರಿಕೆಯ ವಿರುದ್ಧ ಪ್ರತಿಭಟನೆ ರೂಪಿಸಲಾಗಿದ್ದು, ಕೋವಿಡ್ ನಿಯಮಾವಳಿಗಳನ್ನು ಪಾಲನೆ ಮಾಡಿಯೇ ನಾಳೆಯಿಂದ ಕಾಂಗ್ರೆಸ್ ಅಕಾಡಕ್ಕಿಳಿಯುತ್ತಿದೆ. ನಾಳೆ ಜಿಲ್ಲಾ ಕೇಂದ್ರಗಳಲ್ಲಿ, ಜೂ.12ರಂದು ತಾಲ್ಲೂಕು ಕೇಂದ್ರಗಳಲ್ಲಿ, 13ರಂದು ಹೋಬಳಿ ಮತ್ತು ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲಿ, 14ರಂದು ಗ್ರಾಮ ಪಂಚಾಯತ್ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ.

ಕೊನೆಯ ದಿನವಾದ ಜೂ.1510ರಂದು ಉಳಿದ ೆಲ್ಲಾ ಪೆಟ್ರೋಲ್ ಬಂಕ್ ಗಳ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ. ಜೂನ್ 16ರಂದು ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರ ಸರ್ಕಾರ ವಿಧಿಸುತ್ತಿರುವ ದುಬಾರಿ ತೆರಿಗೆಯನ್ನು ಕಡಿತ ಮಾಡಲು ಒತ್ತಡತರಬೇಕು ಎಂದು ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ.

ಪ್ರತಿಭಟನೆಯ ಸಂದರ್ಭದಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲನೆ ಮಾಡಬೇಕು. ಮಾಸ್ಕ್ ಧರಿಸಿ, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಬೇಕು, ತೈಲಬೆಲೆ ಏರಿಕೆಯನ್ನು ವಿರೋಧಿಸುವ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಬೇಕು. ಸ್ಥಳೀಯ ಹಿರಿಯ ನಾಯಕರು, ಪಕ್ಷದ ಪದಾಧಿಕಾರಿಗಳು, ಶಾಸಕರು, ಕಳೆದ ವಿಧಾನಸಭೆ ಚುನಾವಣೆಯ ಆಭ್ಯರ್ಥಿಗಳು, ಮುಂಚೂಣಿ ಘಟಕ, ವಿಭಾಗಗಳ ಪದಾಧಿಕಾರಿಗಳು, ಕೆಪಿಸಿಸಿ ಸದಸ್ಯರು, ಸಂಸದರು, ಮಾಜಿ ಸಂಸದರು ಭಾಗವಹಿಸಬೇಕು ಎಂದು ಸೂಚಿಸಲಾಗಿದೆ.

ಪ್ರತಿಯೊಂದು ಕ್ಷೇತ್ರಕ್ಕೂ ನಿಯೋಜಿತ ಸಂಯೋಜಕರು ಮತ್ತು ಮಾಜಿ ಉಸ್ತುವಾರಿ ಪದಾಧಿಕಾರಿಗಳು ಐದು ದಿನಗಳ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಜಿಲ್ಲೆ, ಬ್ಲಾಕ್ ಸಮಿತಿಗಳ ಅಧ್ಯಕ್ಷರು ಪ್ರತಿಭಟನೆಯನ್ನು ಯಶಸ್ವಿಯಾಗಿ ನಿಭಾಯಿಸಬೇಕು ಎಂದು ಸಲಹೆ ನೀಡಲಾಗಿದೆ.
ಕಾಂಗ್ರೆಸ್ ನ 32 ಸಂಘನಾ ಜಿಲ್ಲೆಗಳಿಗೂ ಹಿರಿಯ ನಾಯಕರನ್ನು ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.

Facebook Comments