ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ ಕೋರಿ ನಾಳೆ ಸಿಎಂಗೆ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.18- ಚಿತ್ರ ಪ್ರದರ್ಶನಕ್ಕೆ ಶೇ.100ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೇತೃತ್ವದಲ್ಲಿ ನಾಳೆ ನಿರ್ಮಾಪಕರು ಹಾಗೂ ಚಿತ್ರರಂಗದ ಗಣ್ಯರು ಸಭೆ ಸೇರಿ ನಿರ್ಣಯ ಕೈಗೊಂಡು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.

ಜೈರಾಜ್ ಅವರ ಅಧ್ಯಕ್ಷತೆಯಲ್ಲಿ ನಾಳೆ ಮಧ್ಯಾಹ್ನ ಸಭೆ ನಡೆಯಲಿದೆ. ಈಗಾಗಲೇ ಹಲವಾರು ನಿರ್ಮಾಪಕರು ತಮ್ಮ ಸಂಕಷ್ಟದ ಪರಿಸ್ಥಿತಿಯನ್ನು ಹೇಳಿಕೊಳ್ಳುತ್ತಿದ್ದಾರೆ. ಇದಲ್ಲದೆ ಕಾರ್ಮಿಕರ ಪರಿಸ್ಥಿತಿಯೂ ಕೂಡ ಶೋಚನೀಯವಾಗಿದೆ. ಇವೆಲ್ಲರದರ ಬಗ್ಗೆ ಸಂಪೂರ್ಣವಾಗಿ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಮೂರು ತಿಂಗಳ ನಂತರ ಚಿತ್ರಮಂದಿರಗಳು ಮತ್ತೆ ಆರಂಭಗೊಳ್ಳುತ್ತಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸಿಕೊಳ್ಳುವುದು ಅವಶ್ಯಕವಾಗಿದೆ. ಇದಲ್ಲದೆ ಶೇ.50ರಷ್ಟು ಪ್ರೇಕ್ಷಕರಿಗೆ ಅನುಮತಿ ನೀಡಿದರೆ ನಿರ್ಮಾಪಕರಿಗೆ ನಷ್ಟವಾಗುತ್ತದೆ.

ಅಲ್ಲದೆ ವಿತರಕರು , ಕಲಾವಿದರು, ಥಿಯೇಟರ್ ಮಾಲೀಕರು ಎಲ್ಲರೂ ಈಗ ಶೇ.100ರಷ್ಟು ಪ್ರೇಕ್ಷಕರಿಗೆ ಅನುಮತಿ ನೀಡಬೇಕು ಎಂಬ ಒತ್ತಡ ಕೇಳಿ ಬಂದಿದೆ.

Facebook Comments

Sri Raghav

Admin