ಗುಜರಾತ್-ರಾಜಸ್ಥಾನ-ದೆಹಲಿಯಲ್ಲಿ ಬಿಜೆಪಿಗೆ ಶೇ.100% ರಿಸಲ್ಟ್..!

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಮೇ 23-ಬಿಜೆಪಿ ಗುಜರಾತ್, ರಾಜಸ್ಥಾನ ಮತ್ತು ದೆಹಲಿ ರಾಜ್ಯಗಳಲ್ಲಿ ಕ್ಲೀನ್‍ಸ್ವೀಪ್ ಮಾಡಿದ್ದು, ಶೇ.100ರಷ್ಟು ಫಲಿತಾಂಶ ಗಳಿಸಿ ದಾಖಲೆ ನಿರ್ಮಿಸಿದೆ.

ಚುನಾವಣೋತ್ತರ ಸಮೀಕ್ಷೆಗಳ ಬಿಂಬಿತ ಫಲಿತಾಂಶ ನಿಜವಾಗಿದ್ದು, ಈ ಮೂರು ರಾಜ್ಯಗಳಲ್ಲೂ ಬಿಜೆಪಿ ಹೊರತುಪಡಿಸಿ ಕಾಂಗ್ರೆಸ್ ಸೇರಿದಂತೆ ಯಾವುದೇ ಪಕ್ಷಗಳು ಖಾತೆ ತೆರೆಯುವಲ್ಲಿ ಸಂಪೂರ್ಣ ವಿಫಲವಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ತವರು ರಾಜ್ಯ ಗುಜರಾತ್ 26 ಲೋಕಸಭಾ ಕ್ಷೇತ್ರಗಳ ಪೈಕಿ ಎಲ್ಲಾ ಸ್ಥಾನಗಳನ್ನು ಬಿಜೆಪಿ ಬಾಚಿಕೊಂಡಿದೆ. ಗುಜರಾತ್‍ನಲ್ಲಿ ವ್ಯಾಪಕ ಚುನಾವಣಾ ಪ್ರಚಾರ ರ್ಯಾಲಿ ನಡೆಸಿದ ಮೋದಿ, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ನಾನು ಮತ್ತೊಮ್ಮೆ ಪ್ರಧಾನಿಯಾಗಬೇಕಾದರೆ ನನ್ನ ರಾಜ್ಯದ ಎಲ್ಲ 26 ಕ್ಷೇತ್ರಗಳನ್ನೂ ಗೆಲ್ಲಿಸಿಕೊಡಿ ಎಂದು ಮತದಾರರಿಗೆ ಮನವಿ ಮಾಡಿದ್ದರು. ಮೋದಿಯವರ ಈ ಕೋರಿಕೆ ಈಡೇರಿದಂತಾಗಿದೆ. [ LOKSABHA ELECTIONS 2019 RESULT – Live Updates]

ಇನ್ನು ಕಾಂಗ್ರೆಸ್ ಪ್ರಾಬಲ್ಯವಿರುವ ರಾಜಸ್ಥಾನದಲ್ಲೂ ಪ್ರಧಾನಿ ನರೇಂದ್ರ ಮೋದಿ ಅಲೆ ಮೋಡಿ ಮಾಡಿದೆ. ಅಲ್ಲಿಯೂ ಕೂಡ ಎಲ್ಲ 26 ಲೋಕಸಭಾ ಕ್ಷೇತ್ರಗಳಲ್ಲೂ ಕೇಸರಿ ಪಕ್ಷ ಜಯ ದಾಖಲಿಸಿದೆ.

ಕಾಂಗ್ರೆಸ್ ಆಡಳಿತವಿರುವ ಈ ರಾಜ್ಯದಲ್ಲಿ ಶತಮಾನಕ್ಕಿಂತಲೂ ಹೆಚ್ಚು ಇತಿಹಾಸ ಹೊಂದಿರುವ ಕಾಂಗ್ರೆಸ್ ಸಂಪೂರ್ಣ ವಿಫಲವಾಗಿರುವುದು ರಾಹುಲ್‍ಗಾಂಧಿ ಮತ್ತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ಭಾರೀ ಮುಖಭಂಗವಾಗಿದೆ.

ರಾಜಧಾನಿ ನವದೆಹಲಿಯ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಕ್ಲೀನ್‍ಸ್ವೀಪ್ ಮಾಡಿದ್ದು, ಶೇ.100ರಷ್ಟು ಫಲಿತಾಂಶ ಸಾಧಿಸಿದೆ. ಇದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್‍ಗೆ ಭಾರೀ ಹಿನ್ನಡೆಯಾಗಿದೆ. [ LOKSABHA ELECTIONS 2019 RESULT – Live Updates]

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin