ವಿಶ್ವಸಂಸ್ಥೆ ಮಹಾಧಿವೇಶನಕ್ಕೆ 100ಕ್ಕೂ ಹೆಚ್ಚು ವಿಶ್ವ ನಾಯಕರು

ಈ ಸುದ್ದಿಯನ್ನು ಶೇರ್ ಮಾಡಿ

ವಿಶ್ವಸಂಸ್ಥೆ, ಸೆ.14-ಮುಂದಿನ ವಾರ ನಡೆಯಲಿರುವ ವಿಶ್ವಸಂಸ್ಥೆಯ ಮಹಾಧಿವೇಶನದಲ್ಲಿ ದೇಶ-ವಿದೇಶಗಳ 100ಕ್ಕೂ ಹೆಚ್ಚು ವಿಶ್ವ ನಾಯಕರು ಪಾಲ್ಗೊಳ್ಳುವ ಸಾಧ್ಯತೆಗಳಿವೆ. ಅಮೆರಿಕಾ ಅಧ್ಯಕ್ಷ ಜೋ ಬೈಡೆನ್, ಜೋರ್ಡಾನ್ ದೊರೆ ಅಬ್ದುಲ್ಲಾ, ಬ್ರೆಜಿಲ್, ವೆನಿಜುವೆಲಾ ಮತ್ತಿತರ ನಾಯಕರ ಹೆಸರುಗಳನ್ನು ಭಾಷಣಕಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿದೆ.

193 ದೇಶಗಳ ಮುಖಂಡರ ಸಮಾವೇಶವನ್ನು ಉದ್ದೇಶಿಸಿ ಭಾರತ, ಜಪಾನ್, ಇಂಗ್ಲೆಂಡ್ ಪ್ರಧಾನಮಂತ್ರಿಗಳು ಭಾಷಣ ಮಾಡಲಿದ್ದಾರೆ.ಇಸ್ರೆಲ್ ನೂತನ ಪ್ರಧಾನ ಮಂತ್ರಿ ನಫ್ತಾಲಿ ಬೆನ್ನೆಟ್, ಪ್ಯಾಲೆಸ್ತಾನ್ ಅಧ್ಯಕ್ಷ ಮಹಮ್ಮದ್ ಅಬ್ಬಾಸ್ ಅವರುಗಳು ಈ ಬಾರಿಯ ಅಧಿವೇಶನದಲ್ಲಿ ಪಾಲ್ಗೊಳ್ಳುತ್ತಿರುವ ಹೊಸ ನಾಯಕರುಗಳಾಗಿದ್ದಾರೆ.

ಕೊರೊನಾ ಮಹಾಮಾರಿಯ ಹಿನ್ನಲೆಯಲ್ಲಿ ಈ ಬಾರಿಯ ಮಹಾಧಿವೇಶನವನ್ನು ವರ್ಚುಯಲ್ ಮೂಲಕ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಜಾಗತಿಕ ಸಮಸ್ಯೆಗಳನ್ನು ಬಗೆಹರಿಸಲು ವರ್ಚುಯಲ್ ಸಭೆ ಮೂಲಕ ಸಾಧ್ಯವಿಲ್ಲದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ವಿಶ್ವನಾಯಕರನ್ನು ಒಗ್ಗೂಡಿಸಿ ಅಧಿವೇಶನ ನಡೆಸುವ ಅಗತ್ಯವಿದೆ ಎಂದು ಮಹಾನ್ ನಾಯಕರು ಅಭಿಪ್ರಾಯಪಟ್ಟ ಹಿನ್ನೆಲೆಯಲ್ಲಿ ಈ ಬಾರಿ ವಿಶ್ವದ 100 ನಾಯಕರನ್ನು ಒಗ್ಗೂಡಿಸಿ ಸಭೆ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ.

Facebook Comments