11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಗರದಲ್ಲಿ ಸಡಗರದ ನುಡಿ ಹಬ್ಬ

ಈ ಸುದ್ದಿಯನ್ನು ಶೇರ್ ಮಾಡಿ

kannadiga

ಬೆಂಗಳೂರು, ಏ.22- ವಿಜಯನಗರದ ಬಿಎಂಟಿಸಿ ಬಸ್ ನಿಲ್ದಾಣ, ಮೆಟ್ರೋ ಆವರಣ ಸೇರಿದಂತೆ ಎಲ್ಲೆಲ್ಲೂ ಸಡಗರ, ಸಂಭ್ರಮ ಹಾಗೂ ಹಬ್ಬದ ವಾತಾವರಣ ನಿರ್ಮಾಣವಾಗಿದೆ.ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ 11ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಜಯನಗರದ ಜನತೆ ಸೇರಿದಂತೆ ಹಂಪಿನಗರ ಸುತ್ತಮುತ್ತಲ ಪ್ರದೇಶಗಳಿಂದ ಕನ್ನಡ ಹಾಗೂ ಸಾಹಿತ್ಯಾಭಿಮಾನಿಗಳು ಸಂಭ್ರಮದಿಂದ ಪಾಲ್ಗೊಂಡರು.

ಸಮ್ಮೇಳನದ ಸರ್ವಾಧ್ಯಕ್ಷರಾಗಿರುವ ಚುಟುಕು ಕವಿ, ಹಿರಿಯ ಸಾಹಿತಿ ಜರಗನಹಳ್ಳಿ ಶಿವಶಂಕರ್ ಅವರನ್ನು ಬೆಳಗ್ಗೆ ಪ್ರಸನ್ನ ಚಿತ್ರಮಂದಿರದಿಂದ ವಿಜಯನಗರ ಬಿಎಂಟಿಸಿ ಬಸ್ ನಿಲ್ದಾಣದ ಮುಂಭಾಗದವರೆಗೂ ಜಾನಪದ ಕಲಾತಂಡ ಹಾಗೂ ಪೂರ್ಣಕುಂಭ ಮೆರವಣಿಗೆಯೊಂದಿಗೆ ವಿಶೇಷವಾಗಿ ಕರೆತರಲಾಯಿತು.ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಮಾಯಣ್ಣ ಪರಿಷತ್ತಿನ ಧ್ವಜಾರೋಹಣ ನೆರವೇರಿಸಿದರು. ಅದ್ಧೂರಿ ಮೆರವಣಿಗೆಗೆ ಸಚಿವ ಎಂ.ಕೃಷ್ಣಪ್ಪ ಚಾಲನೆ ನೀಡಿದರು.ಎಲ್ಲಿಯೂ ಸಂಚಾರಕ್ಕೆ ತೊಂದರೆಯಾಗದಂತೆ ಮೆರವಣಿಗೆ ವೇದಿಕೆ ವರೆಗೂ ಸಾಗಿ ಬಂದಿತು. ದಾರಿಯುದ್ದಕ್ಕೂ ಅಭಿಮಾನಿಗಳು ಪುಷ್ಪವೃಷ್ಟಿ ಮಾಡಿದರೆ, ಮಹಿಳೆಯರು ಅಲ್ಲಲ್ಲೇ ಬಣ್ಣ ಬಣ್ಣದ ರಂಗೋಲಿ ಬಿಡಿಸಿ ಸ್ವಾಗತಿಸಿದರು.

ಶಿಕ್ಷಣ ಮಾಧ್ಯಮ ಕನ್ನಡದಲ್ಲಿ:

ಕಾರ್ಯಕ್ರಮದಲ್ಲಿ ಮಾಯಣ್ಣ ಮಾತನಾಡಿ, ಶಿಕ್ಷಣ ಮಾಧ್ಯಮ ಕನ್ನಡದಲ್ಲೇ ಇರಬೇಕೆಂದು ಒತ್ತಾಯಿಸಿದರು.ಬೆಂಗಳೂರಿನಲ್ಲಿ ಕನ್ನಡ ಭಾಷೆಗೆ ತೊಂದರೆಯಾಗದಂತೆ ಸಾಹಿತ್ಯ ಪರಿಷತ್ ಕಾರ್ಯ ನಿರ್ವಹಿಸುತ್ತಿದೆ. ಮುಂದಿನ ಡಿಸೆಂಬರ್‍ನಲ್ಲಿ ಚಂದಾಪುರದಲ್ಲೂ ಸಾಹಿತ್ಯ ಸಮ್ಮೇಳನವನ್ನು ನಡೆಸಲಾಗುವುದು ಎಂದು ಹೇಳಿದರು.ತಮಿಳು ನಟ ಸತ್ಯರಾಜ್ ಕಾವೇರಿ ಕುರಿತು ಮಾತನಾಡಿವುದನ್ನು ಖಂಡಿಸಿ ಬಾಹುಬಲಿ-2 ಚಲನಚಿತ್ರವನ್ನು ರಾಜ್ಯದಲ್ಲಿ ಪ್ರದರ್ಶಿಸಲು ಬಿಡವುದಿಲ್ಲ ಎಂದು ಕನ್ನಡಿಗರು ಒಗ್ಗೂಡಿ ತಮ್ಮ ಶಕ್ತಿ ತೋರಿದ್ದಾರೆ. ನಮ್ಮ ಭಾಷೆಗೆ ತೊಂದರೆ ಉಂಟಾದಾಗ ಸಾಹಿತ್ಯ ಪರಿಷತ್ ಸೇರಿದಂತೆ ಕನ್ನಡಿಗರು ಬೀದಿಗಿಳಿದು ಹೋರಾಟ ಮಾಡುತ್ತಾರೆ ಎಂದು ಎಚ್ಚರಿಸಿದರು.

ವಿಧಾನಪರಿಷತ್ ಸದಸ್ಯ ವಿ.ಸೋಮಣ್ಣ ಮಾತನಾಡಿ, ವಿಜಯನಗರದ ಘತವೈಭವ ಮರುಕಳಿಸುವಂತಾಗಬೇಕು ಎಂದು ಆಶಿಸಿದರು.ಕನ್ನಡಿಗರು ಒಗ್ಗಟ್ಟಾಗಿ ಕಾರ್ಯಮಾಡಬೇಕು. ನಮ್ಮ ಭಾಷೆ, ಸಂಸ್ಕೃತಿಗೆ  ಧಕ್ಕೆ ಬಂದಾಗ ಒಗ್ಗೂಡಿ ಎದುರಿಸಬೇಕೆಂದು ಕರೆ ನೀಡಿದರು.ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾಹಿತಿ ಹಂಪಾನಾಗರಾಜಯ್ಯ, ವಿಧಾನಪರಿಷತ್ ಮಾಜಿ ಸದಸ್ಯ ಅಶ್ವತ್ಥನಾರಾಯಣ್, ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್, ಪಾಲಿಕೆ ಮಾಜಿ ಸದಸ್ಯ ಎಚ್.ರವೀಂದ್ರ, ಹಿರಿಯ ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ, ಮಾಜಿ ಉಪಮಹಾಪೌರ ಎಂ.ಲಕ್ಷ್ಮೀನಾರಾಯಣ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

 

 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin