11ರಂದು ಗ್ರಾಮ ಲೆಕ್ಕಾಧಿಕಾರಿಗಳ ಮುಷ್ಕರ

ಈ ಸುದ್ದಿಯನ್ನು ಶೇರ್ ಮಾಡಿ

Protest--00002

ಬೆಂಗಳೂರು, ಅ.6- ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಮಸ್ಯೆಗಳನ್ನು ಬಗೆ ಅರಿಸಲು ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದರೂ ಸಕಾರಾತ್ಮಕ ಸ್ಪಂದನೆ ದೊರೆಯದ ಕಾರಣ ಇದೇ 11ರಂದು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅನಿರ್ದಿಷ್ಠಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಅಧ್ಯಕ್ಷ ಆನಂದಗೌಡ ದಾನಪ್ಪಗೌಡ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮ ಲೆಕ್ಕಾಧಿಕಾರಿಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಸೇವಾ ನಿಯಮದಿಂದ ಅನ್ಯಾಯಗಳು ಮತ್ತು ಕ್ಷೇತ್ರಗಳ ಕಾರ್ಯಗಳಲ್ಲಾಗುವ ತೊಂದರೆಗಳು ಮತ್ತು ತಂತ್ರಾಂಶಗಳಿಂದ ಏರುತ್ತಿರುವ ಮಾನಸಿಕ ಮತ್ತು ದೈಹಿಕ ಒತ್ತಡವನ್ನು ನಿವಾರಿಸುವಂತೆ ಹಾಗೂ ನಮ್ಮ ಸಂಘದ ನ್ಯಾಯಸಮ್ಮತ ಬೇಡಿಕೆ ಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರೂ ಸರ್ಕಾರ ಯಾವುದೇ ಪ್ರತಿ ಕ್ರಿಯೆ ನೀಡಿಲ್ಲ.

ನಮಗೆ ನಿರಾಶೆ ಉಂಟಾ ಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಜಾಬ್‍ಚಾರ್ಟ್‍ಅನ್ನು ಜಾರಿಗೊಳಿಸು ವುದು, ಗ್ರಾಮ ಲೆಕ್ಕಾಧಿಕಾರಿಗಳಿಗೆ ಪಧೋನ್ನತಿಯಲ್ಲಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವುದು ಅನ್ಯ ಇಲಾಖೆಯ ಕೆಲಸ ಕಾರ್ಯಗಳನ್ನು ಇನ್ನು ಮುಂದೆ ನೀಡಬಾರದು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳಿಗೆ ಕಚೇರಿ ಮತ್ತು ವಸತಿ ಗೃಹವನ್ನು ನಿರ್ಮಿಸಿಕೊಡಬೇಕು ಎಂಬ ಇನ್ನಿತರೆ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ರಾಜ್ಯ ಸಂಘದಲ್ಲಿ ತೀರ್ಮಾನಿಸಿದಂತೆ ಅ.11ರಂದು ಸಾಂಕೇತಿಕವಾಗಿ ಮುಷ್ಕರ ನಡೆಸಿ ಸಮಸ್ಯೆಗಳನ್ನು ಈಡೇರಿಸುವಂತೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.
ಗೌರವಾಧ್ಯಕ್ಷ ಡಿ.ಸುದೀಪ್, ಉಪಾಧ್ಯಕ್ಷ ಚಂದ್ರಶೇಖರ್ ಉಪಸ್ಥಿತರಿದ್ದರು.

Facebook Comments

Sri Raghav

Admin