13 ತುಂಡಾಗಿ ಕತ್ತರಿಸಿರುವ ಅಪರಿಚಿತ ಮಹಿಳೆಯ ಶವ ಪತ್ತೆ..!

ಈ ಸುದ್ದಿಯನ್ನು ಶೇರ್ ಮಾಡಿ

Women-deadad-zxdvclZSvc[mz,

ಪನ್ವೇಲ್, ಡಿ.29-ಅಪರಿಚಿತ ಮಹಿಳೆಯೊಬ್ಬಳನ್ನು ಕೊಲೆಗೈದು 13 ತುಂಡುಗಳಾಗಿ ಕತ್ತರಿಸಿರುವ ಘಟನೆ ಮುಂಬೈ ಸಮೀಪದ ಪನ್ವೇಲ್‍ನಲ್ಲಿ ನಡೆದಿದೆ. ಮೂರು ಪ್ಲಾಸ್ಟಿಕ್ ಬ್ಯಾಗ್‍ನಲ್ಲಿ ತುಂಬಿದ ದೇಹದ ತುಂಡುಗಳು ಬುಧವಾರ ಸಂಜೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುತು ಪತ್ತೆಯಾಗದ ಸ್ಥಿತಿಯಲ್ಲಿ ಶವ ದೊರೆತಿದೆ. ಮಹಿಳೆ ಕೈ, ಕಾಲು ಹಾಗೂ ತಲೆಗೆ ಗಂಭೀರ ಗಾಯಗಳಾಗಿದ್ದವು. ಪಶ್ಚಿಮ ಪನ್ವೇಲ್‍ನ ಖಾಂಢಾ ಕಾಲೋನಿಯ ಗ್ಯಾರೇಜ್‍ವೊಂದರ ಬಳಿ ಶವವನ್ನು ಬಿಸಾಡಲಾಗಿತ್ತು. ಗ್ಯಾರೇಜ್‍ನಲ್ಲಿ ಕೆಲಸ ಮಾಡುವವರು ದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin