13 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಬಳಸುವಂತಿಲ್ಲ ..! : ಸರ್ಕಾರ ಕಟ್ಟಾದೇಶ

ಈ ಸುದ್ದಿಯನ್ನು ಶೇರ್ ಮಾಡಿ

Social-Media--01ಬೆಂಗಳೂರು, ಮೇ 27- ಹದಿಮೂರು ವರ್ಷದೊಳಗಿನ ಶಾಲಾ ಮಕ್ಕಳು ಸಾಮಾಜಿಕ ಜಾಲತಾಣ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ತಡೆಗಟ್ಟಬೇಕೆಂದು ರಾಜ್ಯದ ಎಲ್ಲ ಶಾಲೆಗಳಿಗೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.  ಸರ್ಕಾರಿ, ಅನುದಾನ ಹಾಗೂ ಅನುದಾನರಹಿತ ಶಾಲೆಗಳ 13 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು ಬಳಸುವುದನ್ನು ತಡೆಗಟ್ಟಬೇಕು. ಬಳಸಿದಲ್ಲಿ ಅಂತಹ ವಿದ್ಯಾರ್ಥಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಅಧಿಸೂಚನೆಯಲ್ಲಿ ನಿರ್ದೇಶಿಸಿದೆ.ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಬಳಸಿದರೆ ಮೊದಲು ಅವರ ಪೋಷಕರಿಗೆ ಮಾಹಿತಿ ನೀಡಬೇಕು. ವಿದ್ಯಾರ್ಥಿಗಳ ಜನನ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಪರಿಶೀಲನೆ ಮಾಡಬೇಕು. ಒಂದು ವೇಳೆ ಪೋಷಕರ ಮಾತನ್ನು ಕೇಳದೆ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಬಳಕೆ ಮಾಡಿದರೆ ಶಿಸ್ತು ಕ್ರಮ ಕೈಗೊಳ್ಳುವ ಹೊಣೆಗಾರಿಕೆಯನ್ನು ಆಯಾ ಶಾಲಾ ಆಡಳಿತ ಮಂಡಳಿಗೆ ನೀಡಲಾಗಿದೆ.   ನಿನ್ನೆಯಷ್ಟೇ ಬೆಂಗಳೂರಿನಲ್ಲಿ 13 ವರ್ಷದ ವಿದ್ಯಾರ್ಥಿಯೊಬ್ಬ ತನ್ನ ಪೊಷಕರ ಏಕಾಂತದಲ್ಲಿರುವ ದೃಶ್ಯಾವಳಿಗಳನ್ನು ಮೊಬೈಲ್‍ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.

ಅಲ್ಲದೆ ಇತ್ತೀಚಿನ ದಿನಗಳಲ್ಲಿ ಮಕ್ಕಳು ಸಾಮಾಜಿಕ ಜಾಲತಾಣ ಬಳಸುತ್ತಿರುವುದರಿಂದ ಅಶ್ಲೀಲ ಚಿತ್ರಗಳನ್ನು ವೀಕ್ಷಣೆ ಮಾಡುವುದು ಅಲ್ಲದೆ ಗೊಂದಲವನ್ನು ಸೃಷ್ಟಿಸಿ ವಿವಾದ ಸೃಷ್ಟಿಸುತ್ತಿದ್ದಾರೆ.  ಇದರ ನಡುವೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯು ಕುಂಠಿತವಾಗುತ್ತಿದ್ದಾರೆ. ಶಿಕ್ಷಕರು ಎಷ್ಟೇ ಗಂಭೀರವಾಗಿ ಬೋಧನೆ ಮಾಡಿದರೂ ಪರೀಕ್ಷೆಗಳಲ್ಲಿ ಮಾತ್ರ ಅಂಕ ಪ್ರಮಾಣ ಅಷ್ಟಕಷ್ಟೆ ಎನ್ನುವಂತಿರುತ್ತದೆ.   ಈ ಎಲ್ಲ ಸಾಧಕ-ಬಾಧಕಗಳನ್ನು ಗಮನಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ 13 ವರ್ಷದೊಳಗಿನ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣ ಪ್ರವೇಶಿಸಿದಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ.

ನಾವು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂಥದ್ದೊಂದು ಕ್ರಮವನ್ನು ಕೈಗೊಂಡಿದ್ದೇವೆ. ಸಾಮಾಜಿಕ ಜಾಲತಾಣದಿಂದ ಉಪಯೋಗವೂ ಇರುವುದರ ಜೊತೆಗೆ ಹೆಚ್ಚಿನ ದುರಪಯೋಗವೂ ಇದೆ. ಪ್ರೌಢಶಾಲೆ ಹಂತದವರೆಗೆ ವಿದ್ಯಾರ್ಥಿಗಳು ಇದನ್ನು ಬಳಸಬಾರದೆಂಬುದು ನಮ್ಮ ಉದ್ದೇಶವಾಗಿದೆ. ಯಾರೊಬ್ಬರೂ ಅಕೌಂಟ್ ತೆರೆಯಬಾರದು ಎಂದು ಸೂಚಿಸಿದೆ. ಇದಕ್ಕೆ ಪೊಷಕರು ಮತ್ತು ಸಾರ್ವಜನಿಕರು ಸಹ ಬೆಂಬಲ ನೀಡಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಮನವಿ ಮಾಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin