ದಟ್ಟ ಮಂಜು ಕವಿದು ಅಪಘಾತ, 13 ಮಂದಿ ಸಾವು, ನಾಲ್ವರ ಸ್ಥಿತಿ ಗಂಭೀರ..!

ಈ ಸುದ್ದಿಯನ್ನು ಶೇರ್ ಮಾಡಿ

ಕೋಲ್ಕತ್ತಾ,ಜ.20- ದಟ್ಟ ಮಂಜು ಕವಿದು ಮಬ್ಬು ಉಂಟಾಗಿದ್ದರಿಂದ ಟ್ರಕ್ ಸೇರಿದಂತೆ ವಿವಿಧ ವಾಹನಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿದ್ದರಿಂದ ಟ್ರಕ್‍ನಲ್ಲಿದ್ದ 13 ಮಂದಿ ಮೃತಪಟ್ಟು 18 ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಜಲ್ಪಗುರಿ ಜಿಲ್ಲೆಯಲ್ಲಿ ನಡೆದಿದೆ. ಜಲ್ಪಗುರಿ ಜಿಲ್ಲೆಯ ಧುಪ್ಗುರಿ ನಗರದಲ್ಲಿ ನಿನ್ನೆ ರಾತ್ರಿ ಈ ಘಟನೆ ಸಂಭವಿಸಿದ್ದು, ಮೃತಪಟ್ಟವರಲ್ಲಿ ಇಬ್ಬರು ಪುರುಷರು, 6 ಮಹಿಳೆಯರು ಹಾಗೂ ನಾಲ್ಕು ಮಕ್ಕಳು ಸೇರಿದ್ದಾರೆ.

ಗಾಯಗೊಂಡಿರುವ 18 ಮಂದಿಯಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಜಲ್ಪೈಗುರಿ ಸೂಪರ್‍ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರನ್ನು ಉತ್ತರ ಬಂಗಾಳ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಹಾಗೂ ಮತ್ತೊಬ್ಬನನ್ನು ಜಲ್ಪೈಗುರಿ ಸದರ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮದುವೆ ಸಮಾರಂಭ ಮುಗಿಸಿಕೊಂಡು ಬಸ್‍ನಲ್ಲಿ ಧುಪ್ಗುರಿಗೆ ವಾಪಸ್ಸಾಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಜಲ್ಧಾಕಾ ಸೇತುವೆ ಬಳಿ ದಟ್ಟ ಮಂಜು ಕವಿದಿದ್ದರಿಂದ ಟ್ರಕ್ ಅಪಘಾತಕ್ಕೀಡಾಗಿದೆ. ಮಂಜು ಕವಿದು ದಾರಿ ಮಬ್ಬಾಗಿದ್ದರಿಂದ ಖಾಸಗಿ ವಾಹನ ಟಾಟಾ ಮ್ಯಾಜಿಕ್, ಮಾರುತಿ ವ್ಯಾನ್ ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ.

ಇದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಮಿನಿವ್ಯಾನ್ ಮತ್ತು ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಟ್ರಕ್ ಉರುಳಿದ್ದರಿಂದ ಅದರಲ್ಲಿದ್ದ 13 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ 18 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Facebook Comments

Sri Raghav

Admin