ಬಾಲಕಿಯನ್ನು ಗ್ಯಾಂಗ್‍ರೇಪ್ ಮಾಡಿ ಕಣ್ಣು ಕಿತ್ತು, ನಾಲಿಗೆ ಕತ್ತರಿಸಿ ಕೊಲೆ..!

ಈ ಸುದ್ದಿಯನ್ನು ಶೇರ್ ಮಾಡಿ

ಲಕ್ನೋ, ಆ.16-ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಗ್ಯಾಂಗ್‍ರೇಪ್ ಮತ್ತು ಬೀಕರ ಹತ್ಯೆಯನ್ನು ಮೀರಿಸುವಂಥ ಪೈಶಾಚಿಕ ಕೃತ್ಯವೊಂದು ಉತ್ತರಪ್ರದೇಶದಲ್ಲಿ ನಡೆದಿದೆ.

ಕಾಮುಕರು 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಕಣ್ಣುಗಳನ್ನು ಕಿತ್ತು, ನಾಲಿಗೆ ಕತ್ತರಿಸಿ ಅತ್ಯಂತ ಭೀಕರವಾಗಿ ಕೊಂದು ಹಾಕಿದ್ದಾರೆ. ಈ ಹೇಯ ಕೃತ್ಯದ ಬಗ್ಗೆ ಸಾರ್ವಜನಿಕರಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಈ ಘಟನೆ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಉತ್ತರಪ್ರದೇಶದ ಲಿಖೀಪುರ ಜಿಲ್ಲೆಯ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಈ ಘೋರ ಕೃತ್ಯ ನಡೆದಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯ ಜನರು ದುಷ್ಕರ್ಮಿಗಳನ್ನು ನೇಣುಗಂಭಕ್ಕೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಘಟನೆಯಿಂದ ಲಿಖೀಂಪುರ್ ಖೇರಿ ಪ್ರದೇಶದ ಉದ್ರಿಕ್ತ ವಾತಾವರಣ ನೆಲೆಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಕ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಭೀಕರ ಕೃತ್ಯ ನಡೆದ ಸ್ಥಳವು ಉತ್ತರ ಪ್ರದೇಶ ರಾಜಧಾನಿ ಲಕ್ನೋದಿಂದ 130 ಕಿ.ಮೀ. ದೂರದಲ್ಲಿದ್ದು, ಇಂಡೋ-ನೇಪಾಳ ಗಡಿ ಪ್ರದೇಶದ ಗ್ರಾಮವಾಗಿದೆ.  ಕಬ್ಬಿನ ಗದ್ದೆಯಲ್ಲಿ ಅತ್ಯಂತ ಬರ್ಬರವಾಗಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಗೀಡಾದ ಬಾಲಕಿಯ ಶವ ಪತ್ತೆಯಾಗುತ್ತಿದ್ದಂತೆ ಉತ್ತರಪ್ರದೇಶಾದ್ಯಂತ ಭಾರೀ ಆಕ್ರೋಶ ಭುಗಿಲೆದ್ದಿದೆ.

ಈ ಬಾಲಕಿ ಶುಕ್ರವಾರ ಮಧ್ಯಾಹ್ನದಿಂದ ಕಾಣೆಯಾಗಿದ್ದಳು, ಆಕೆಗಾಗಿ ಪೋಷಕರು ಮತ್ತು ಸಂಬಂದಿಕರು ತೀವ್ರ ಶೋಧ ನಡೆಸುತ್ತಿದ್ದರು. ನಿನ್ನೆ ಕಬ್ಬಿನ ಗದ್ದೆಯಲ್ಲಿ ಬಾಲಕಿಯ ಶವ ಪತ್ತೆಯಾಗಿದೆ.

ಬಾಲಕಿ ಮೇಲೆ ಅತ್ಯಂತ ಕ್ರೂರ ರೀತಿಯಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಮೈಮೇಲಿದ್ದ ದುಪ್ಪಟದಿಂದಲೇ ಉಸಿರುಗಟ್ಟಿಸಿ ಕೊಂದಿರುವ ದುಷ್ಕರ್ಮಿಗಳು ನಂತರ ಕಣ್ಣುಗಳನ್ನು ಕಿತ್ತು ಹಾಕಿ, ನಾಲಿಗೆ ಕತ್ತರಿಸಿ ಪರಾರಿಯಾಗಿದ್ದಾರೆ.

ಈಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆಯ ಮೇಲೆ ಗ್ಯಾಂಗ್‍ರೇಪ್ ನಡೆದಿರುವುದು ಮತ್ತು ಚಿತ್ರಹಿಂಸೆ ನೀಡಿ ಕೊಂದಿರುವುದು ದೃಢಪಟ್ಟಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಅದೇ ಗ್ರಾಮದ ಇಬ್ಬರನ್ನು ಬಂಸಿ ತೀವ್ರ ವಿಚಾರಣೆ ಒಳಪಡಿಸಿದ್ದಾರೆ. ಉಳಿದ ಆರೋಪಿಗಳ ಸೆರೆಗೆ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ.

ಈ ಬರ್ಬರ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯನ್ನು ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷದ ನಾಯಕಿ ಯಾಯಾವತಿ ಸೇರಿದಂತೆ ಅನೇಕ ಗಣ್ಯರು ಉಗ್ರವಾಗಿ ಖಂಡಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ.

ದೆಹಲಿಯಲ್ಲಿ ನಡೆದ ನಿರ್ಭಯಾ ಮತ್ತು ಹೈದರಾಬಾದ್‍ನಲ್ಲಿ ನಡೆದ ಪ್ರಿಯಾಂಕಾ ರೆಡ್ಡಿ ಮೇಲಿನ ಭೀಕರ ಸಾಮೂಹಿಕ ಅತ್ಯಾಚಾರ ಮತ್ತು ಕಗ್ಗೊಲೆ ಪ್ರಕರಣದ ರೀತಿಯಲ್ಲೇ ಈ ಕೃತ್ಯದ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

Facebook Comments

Sri Raghav

Admin