13,306 ಅತಿಥಿ ಶಿಕ್ಷಕರ ನೇಮಕಕ್ಕೆ ಸಮ್ಮತಿ

ಈ ಸುದ್ದಿಯನ್ನು ಶೇರ್ ಮಾಡಿ

13,306 ಅತಿಥಿ ಶಿಕ್ಷಕರ ನೇಮಕಕ್ಕೆ ಸಮ್ಮತಿರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕೊರತೆಯಿರುವ 22 ಸಾವಿರ ಶಿಕ್ಷಕರ ಪೈಕಿ 13,306 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ 10 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಒಪ್ಪಿಗೆ ಪಡೆದಿರುವೆ. ಹೆಚ್ಚುವರಿಯಾಗಿ 3,306 ಅತಿಥಿ ಶಿಕ್ಷಕರ ನೇಮಕಾತಿಗೂ ಸಮ್ಮತಿ ಕೇಳಿದ್ದೇನೆ ಎಂದು ಹೇಳಿದರು.  ಇದೇ ರೀತಿ ಇನ್ನು ಮುಂದೆ ಶಿಕ್ಷಕರ ಕೊರತೆಯಾಗದಂತೆ ನೋಡಿಕೊಳ್ಳುತ್ತೇನೆ. ಪ್ರತೀ ಎರಡು ವರ್ಷದಲ್ಲಿ ನಿವೃತ್ತಿಯಾಗುವ ಶಿಕ್ಷಕರ ಸಂಖ್ಯೆ ಗಮನದಲ್ಲಿಟ್ಟುಕೊಂಡು ನೇಮಕಾತಿ ಮಾಡಲು ಕ್ರಮ ಕೈಗೊಳ್ಳುತ್ತೇವೆ.

 

Facebook Comments

Sri Raghav

Admin