14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಅತ್ಯಾಚಾರಿ ಅರೆಸ್ಟ್
ಉಪ್ಪಿನಂಗಡಿ, ಮಾ. 22- ಅತ್ಯಾಚಾರ ಪ್ರಕರಣವೊಂದಕ್ಕೆ ಸಂಬಂಧಿಸಿ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ. ನೆಕ್ಕಿಲಾಡಿ ಗ್ರಾಮದ ಬೀತಲಪ್ಪು ನಿವಾಸಿ ಹಿತೇಶ್ ಬಂಧಿತ ಆರೋಪಿ. ಈತ ಮತ್ತು ಗಿರೀಶ್ ಎಂಬಾತ 2004ರಲ್ಲಿ ಬೆಳ್ತಂಗಡಿ ತಾಲೂಕಿನ ಕರಾಯದ ಮನೆಯೊಂದಕ್ಕೆ ನುಗ್ಗಿ ಪತಿ ಮತ್ತು ಮಕ್ಕಳ ಎದುರೇ ಮಹಿಳೆಯನ್ನು ಅತ್ಯಾಚಾರ ನಡೆಸಿ ಪರಾರಿಯಾಗಿದ್ದರು.
ಅಂದಿನಿಂದ ತಲೆಮರೆಸಿಕೊಂಡಿದ್ದ ಈ ಇಬ್ಬರ ಪೈಕಿ ಹಿತೇಶ್ ಬೆಂಗಳೂರಿನಲ್ಲಿ ನೆಲೆಸಿದ್ದ. ಈಗ ಈತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದಾರೆ. ದ.ಕ. ಜಿಲ್ಲಾ ಎಸ್ಪಿ ರವಿಕಾಂತೇ ಗೌಡ, ಹೆಚ್ಚುವರಿ ಎಸ್ಪಿ ಸಜಿತ್ ಕುಮಾರ್, ಡಿವೈಎಸ್ಪಿ ಶ್ರೀನಿವಾಸ್ ಹಾಗು ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ಗೋಪಾಲ್ ನಾಯಕ್ ಅವರ ಮಾರ್ಗದರ್ಶನದಂತೆ ಉಪ್ಪಿನಂಗಡಿ ಠಾಣೆ ಉಪ ನಿರೀಕ್ಷಕ ನಂದಕುಮಾರ್ ಅವರ ನೇತೃತ್ವದಲ್ಲಿ ಉಪ್ಪಿನಂಗಡಿ ಠಾಣೆ ಸಿಬ್ಬಂದಿಗಳಾದ ಹರಿಶ್ಚಂದ್ರ, ಪ್ರವೀಣ್ ರೈ, ಇರ್ಷಾದ್ ಹಾಗು ಜಗದೀಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.