ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಿಷೇಧಾಜ್ಞೆ ವಿಸ್ತರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.16- ಕೆಜಿಹಳ್ಳಿ ಮತ್ತು ಡಿಜೆಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಇನ್ನೂ ಎರಡು ದಿನಗಳ ಕಾಲ ನಿಷೇಧಾಜ್ಞೆಯನ್ನು ವಿಸ್ತರಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಆದೇಶ ಹೊರಡಿಸಿದ್ದಾರೆ.

ಈ ಠಾಣೆಗಳ ವ್ಯಾಪ್ತಿಯಲ್ಲಿ ಗಲಭೆ ನಡೆದ ಆಗಸ್ಟ್ 11ರ ಬೆಳಗ್ಗೆ 6 ಗಂಟೆಯಿಂದ ಇಂದು ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ವಿಸಲಾಗಿತ್ತು. ಪರಿಸ್ಥಿತಿ ಇನ್ನೂ ಬಿಗುವಿನಿಂದ ಕೂಡಿರುವುದರಿಂದ ಆಗಸ್ಟ್ 18ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆಯನ್ನು ಮುಂದುವರಿಸಲಾಗಿದೆ.

ಎರಡಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ ಹಾಗೂ ಅನಗತ್ಯವಾಗಿ ಸಂಚರಿಸುವಂತಿಲ್ಲ. ಯಾವುದೇ ಮೆರವಣಿಗೆ ಮತ್ತು ಸಭೆಗಳನ್ನು ನಡೆಸುವುದು, ಸ್ಪೋಟಕ ವಸ್ತುಗಳನ್ನು ಸಿಡಿಸುವುದು, ಮಾರಕಾಸ್ತ್ರಗಳನ್ನು ಒಯ್ಯುವುದನ್ನು ನಿಷೇಸಲಾಗಿದೆ.

Facebook Comments

Sri Raghav

Admin