15 ದಿನಗಳೊಳಗೆ ಕಾಮಗಾರಿ ಆರಂಭಿಸಿ : ಅಧಿಕಾರಿಗಳಿಗೆ ಮೇಯರ್ ಪದ್ಮಾವತಿ ಕಟ್ಟುನಿಟ್ಟಿನ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

bommanahali
ಬೆಂಗಳೂರು, ನ.2- ಬಜೆಟ್‍ನಲ್ಲಿ ಪ್ರಸ್ತಾಪಿಸ ಲಾಗಿರುವ ಪಿಒಡಬ್ಲ್ಯು ಕಾಮಗಾರಿಗಳನ್ನು 15 ದಿನಗಳೊಳಗೆ ಆರಂಭಿಸಬೇಕು ಎಂದು ಮೇಯರ್ ಜಿ.ಪದ್ಮಾವತಿ ಬಿಬಿಎಂಪಿ ಅಧಿಕಾರಿ ಗಳಿಗೆ ಇಂದಿಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದರು.ಬೊಮ್ಮನಹಳ್ಳಿ ವಲಯ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮೇಯರ್ ಅವರು ಅಧಿಕಾರಿಗಳಿಗೆ ಈ ಆದೇಶ ನೀಡಿದರು.ಬಜೆಟ್ ಅವಧಿ ಪೂರ್ಣಗೊಳ್ಳಲು ಕೇವಲ 5 ತಿಂಗಳು ಬಾಕಿ ಇದ್ದರೂ ಇದುವರೆಗೂ ಕಾಮಗಾರಿಗಳನ್ನು ಆರಂಭಿಸದ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಮೇಯರ್ ಅವರು 15 ದಿನಗಳೊಳಗೆ ಕಾರ್ಯಾರಂಭ ಮಾಡುವಂತೆ ಆದೇಶಿಸಿದರು.

ಅದೇ ರೀತಿ ಸಂಪನ್ಮೂಲ ಕ್ರೋಢೀಕರಣಕ್ಕೂ ಹೆಚ್ಚು ಒತ್ತು ನೀಡಬೇಕು. ಅತಿ ಹೆಚ್ಚು ತೆರಿಗೆ ಸಂಗ್ರಹವಾಗುವ ಬೊಮ್ಮನಹಳ್ಳಿ ವಲಯದಲ್ಲಿ ಸಂಗ್ರಹವಾಗಬೇಕಿರುವ ತೆರಿಗೆಯನ್ನು 30 ದಿನಗಳೊಳಗೆ ವಸೂಲಿ ಮಾಡುವಂತೆ ಸೂಚಿಸಿದರು.ಬಜೆಟ್‍ನಲ್ಲಿ ಮೀಸಲಿಡಲಾಗಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸಿ ಇದರೊಂದಿಗೆ ಬೇಸಿಗೆಯಲ್ಲಿ ಉಂಟಾಗ ಬಹುದಾದ ಕುಡಿಯುವ ನೀರಿನ ಅಭಾವ ತಪ್ಪಿಸಲು ಬೋರ್‍ವೆಲ್‍ಗಳನ್ನು ಕೊರೆಸುವಂತೆ ಸಲಹೆ ನೀಡಿದರು.ಇದರೊಂದಿಗೆ ಸ್ವಚ್ಛ ಬೆಂಗಳೂರಿಗೂ ಬಿಬಿಎಂಪಿ ಅಧಿಕಾರಿಗಳಿಗೆ ಗಮನ ಹರಿಸಬೇಕು ಎಂದು ಕಿವಿಮಾತು ಹೇಳಿದರು.ಶಾಸಕ ಸತೀಶ್ ರೆಡ್ಡಿ, ಆಡಳಿತ ಪಕ್ಷದ ನಾಯಕ ಸತ್ಯನಾರಾಯಣ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin