ಅತಿ ವೇಗ: 15 ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಬಳ್ಳಾಪುರ, ಜು.14- ಅತಿವೇಗ ಹಾಗೂ ಅಜಾಗರೂಕತೆಯಿಂದ ದ್ವಿಚಕ್ರ ವಾಹನ ಚಲಾಯಿಸುವ 15ಕ್ಕೂ ಹೆಚ್ಚು ಮಂದಿಯ ವಿರುದ್ಧ ಆರ್‍ಟಿಒ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸಿದರು.

ಪ್ರತಿ ಭಾನುವಾರದಂತೆ ಈ ವಾರವೂ ಬೆಂಗಳೂರಿನಿಂದ ಬಾಗೇಪಲ್ಲಿ, ನಂದಿಬೆಟ್ಟ, ಆವಲಬೆಟ್ಟಗಳ ಕಡೆಗೆ ಅತಿವೇಗ ಹಾಗೂ ಅಜಾಗೂರಕತೆಯಿಂದ ಬರುವ ಯುವಕರ ಬಗ್ಗೆ ಕೆಲವು ದೂರುಗಳು ಬಂದಿದ್ದವು.

ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 8 ಗಂಟೆಯಿಂದಲೇ ರಾಷ್ಟ್ರೀಯ ಹೆದ್ದಾರಿ 7ರ ಹಾರೋಬಂಡೆ ಬಳಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಕಮಲ್‍ಬಾಬು ನೇತೃತ್ವದ ತಂಡ ಕಾರ್ಯಾಚರಣೆ ಕೈಗೊಂಡಿತ್ತು.

ಈ ವೇಳೆ 15ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಯಿತಲ್ಲದೆ, ಅತಿ ವೇಗ ಹಾಗೂ ಅಜಾಗರೂಕ ಚಾಲನೆಯಿಂದ ಆಗುವ ಅವಘಡಗಳ ಬಗ್ಗೆ ಅರಿವು ಮೂಡಿಸಲಾಯಿತು.

Facebook Comments