ವಿಶ್ವದಾದ್ಯಂತ ಕೊರೊನಾ ವಿರುದ್ಧ ಹೋರಾಡಿ ಗೆದ್ದ 15 ಲಕ್ಷ ಸೋಂಕಿತರು..!

ಈ ಸುದ್ದಿಯನ್ನು ಶೇರ್ ಮಾಡಿ

ವಾಷ್ಟಿಂಗ್ಟನ್/ರೋಮ್/ಪ್ಯಾರಿಸ್, ಮೇ 12- ಕಿಲ್ಲರ್ ಕೊರೊನಾ ಇಡೀ ವಿಶ್ವವನ್ನು ವ್ಯಾಪಿಸಿದ್ದು, ವಿಷವರ್ತಲ ಆವರಿಸಿ ಭಯಭೀತಿಯ ವಾತಾವರಣ ಸೃಷ್ಟಿಯಾಗಿರುವಾಗಲೇ ಸೋಂಕು ಮತ್ತು ಸಾವು ಪ್ರಕರಣಗಳ ಸಂಖ್ಯೆಯೂ ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದೆ.

ಈ ನಡುವೆ ಜಗತ್ತಿನ ವಿವಿಧೆಡೆ ಸುಮಾರು 15 ಲಕ್ಷ ಮಂದಿ ಸಾವಿನ ದವಡೆಯಿಂದ ಪಾರಾಗಿದ್ದಾರೆ.ಪ್ರಪಂಚದಾದ್ಯಂತ ಈವರೆಗೆ 2,85,332 ಸಾವು ಮತ್ತು 41.70 ಲಕ್ಷಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿವೆ.

ವಿಶ್ವವ್ಯಾಪಿ ಸಾವಿನ ಸಂಖ್ಯೆ 3 ಲಕ್ಷಕ್ಕೇರುವ ಆತಂಕವಿರುವಾಗಲೇ, ಸುಮಾರು 14.50 ಲಕ್ಷಕ್ಕಿಂತಲೂ ಅಧಿಕ ಮಂದಿ ಸಾಂಕ್ರಾಮಿಕ ರೋಗಗಳು ಚೇತರಿಸಿಕೊಂಡು ಗುಣಮುಖರಾಗಿರುವುದು ಸಮಾಧಾನಕರ ಸಂಗತಿಯಾಗಿದೆ.

ಹಿಂದೆಂದೂ ಕಂಡು ಕೇಳರಿಯದ ರೀತಿಯಲ್ಲಿ ಇಡೀ ಜಗತ್ತಿನಾದ್ಯಂತ ಅಪಾರ ಸಾವು-ನೋವು ಮತ್ತು ಭಾರೀ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿರುವ ವಿನಾಶಕಾರಿ ಕೊರೊನಾ ವೈರಸ್ ದಾಳಿಯಿಂದ ಎಲ್ಲ ರಾಷ್ಟ್ರಗಳು ಕಂಗೆಟ್ಟು ಅಸಹಾಯಕವಾಗಿವೆ.

ಇದೇ ಪರಿಸ್ಥಿತಿ ಮುಂದುವರಿದಲ್ಲಿ ನಾಳೆ ವೇಳೆಗೆ ಸಾಂಪ್ರಾಮಿಕ ರೋಗ ಪೀಡಿತರ ಸಂಖ್ಯೆ 45 ಲಕ್ಷ ದಾಟುವ ಆತಂಕವಿದೆ. ಅಮೆರಿಕ, ಸ್ಪೇನ್, ಇಂಗ್ಲೆಂಡ್, ರಷ್ಯಾ ಮತ್ತು ಇಟಲಿ- ಅತಿ ಹೆಚ್ಚು ಸಾವು ಮತ್ತು ಸೋಂಕು ಸಂಭವಿಸಿದ ವಿಶ್ವದ ಟಾಪ್ ಫೈವ್ ದೇಶಗಳಾಗಿವೆ.

ಕೊರೊನಾ ವೈರಸ್‍ಗೆ ಅಂಕುಶ ಹಾಕಲು ವಿಶ್ವದ ಎಲ್ಲ ದೇಶಗಳು ಒಗ್ಗೂಡಿ ಓಡಾಡುತ್ತಿದ್ದರೂ, ಮಹಾಮಾರಿ ರೌದ್ರಾವತಾರ ಯಥಾಸ್ಥಿತಿಯಲ್ಲಿಯೇ ಮುಂದುವರಿದಿದೆ.

ಪ್ರಪಂಚದ 250ಕ್ಕೂ ಹೆಚ್ಚು ದೇಶಗಳು .ಈ ಹೆಮ್ಮಾರಿಯ ಅಟ್ಟಹಾಸಕ್ಕೆ ಕಂಗೆಟ್ಟಿವೆ. ವಿಶ್ವದಾದ್ಯಂತ ವ್ಯಾಪಕ ಸಾವು ಮತ್ತು ಸೋಂಕು ಪ್ರಕರಣಗಳು ಕಳವಳಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದ್ದು, ಮರಣ ಪ್ರಮಾಣ ಮತ್ತಷ್ಟು ವೃದ್ಧಿಯಾಗುವ ಆತಂಕವಿದೆ.

Facebook Comments

Sri Raghav

Admin