167 ಮಂದಿ ಪೊಲೀಸರಿಂದ ಪ್ಲಾಸ್ಮಾ ದಾನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.30- ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆದು ಚೇತರಿಸಿಕೊಂಡಿ ರುವ 167 ಮಂದಿ ಪೊಲೀಸ್ ಸಿಬ್ಬಂದಿಗಳು ಪ್ಲಾಸ್ಮಾ ದಾನ ಮಾಡಲು ಮುಂದಾಗಿದ್ದಾರೆ ಎಂದು ಕೆಎಸ್‍ಆರ್‍ಪಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಪ್ಲಾಸ್ಮಾ ದಾನ ಕುರಿತಂತೆ ಜನಜಾಗೃತಿಗಾಗಿ ನಡೆದ ಸೈಕಲ್ ಜಾಥಾಗೆ ಅಶೋಕನಗರದ ಸುನಿವಾನ್ ಪೊಲೀಸ್ ಹಾಕಿ ಕ್ರೀಡಾಂಗಣದಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಚಾಲನೆ ನೀಡಿದರು.

ಪ್ಲಾಸ್ಮಾ ದಾನದಿಂದ ಕೊರೊನಾ ವಿರುದ್ಧ ಹೋರಾಟಕ್ಕೆ ಹೆಚ್ಚಿನ ಬಲ ಬರುತ್ತದೆ. ಸೋಂಕಿನಿಂದ ಗುಣಮುಖ ರಾದವರು ಮುಂದೆ ಬಂದು ಪ್ಲಾಸ್ಮಾ ದಾನ ಮಾಡಬೇಕು. ಇದರಿಂದ ಮತ್ತಷ್ಟು ಮಂದಿಗೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅಲೋಕ್ ಕುಮಾರ್ ಅವರು, ಬಹಳಷ್ಟು ಮಂದಿ ಪೊಲೀಸರು ಕೊರೊನಾ ಸೋಂಕಿಗೆ ಸಿಲುಕಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.

ಗುಣಮುಖರಾದವರ ಪ್ಲಾಸ್ಮಾ ಬಳಕೆ ಮಾಡಿ ಕೊರೊನಾಗೆ ಚಿಕಿತ್ಸೆ ನೀಡಬಹುದಾಗಿದೆ. ನಮ್ಮ ಪೊಲೀಸ್ ಸಿಬ್ಬಂದಿಗಳ ಪೈಕಿ ಸದ್ಯಕ್ಕೆ 167 ಮಂದಿ ಪ್ಲಾಸ್ಮಾ ದಾನ ಮಾಡಲು ಮುಂದಾಗಿದ್ದಾರೆ ಎಂದರು.

Facebook Comments

Sri Raghav

Admin