ಮನಿಲಾದಿಂದ ಬೆಂಗಳೂರಿಗೆ ಬಂದಿಳಿದ 176 ಪ್ರಯಾಣಿಕರು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು , ಮೇ 26- ಫಿಲಿಪ್ಪೈನ್ಸ್ ನ ಮನಿಲಾದಿಂದ ಇಂದು ಬೆಳಗ್ಗೆ 7 ಗಂಟೆಗೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಹದಿನೇಳನೆ ಏರ್ ಇಂಡಿಯಾ ವಿಮಾನದಲ್ಲಿ 176 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 176 ಮಂದಿ ಪ್ರಯಾಣಿಕರಲ್ಲಿ 115 ಪುರುಷರು ಮತ್ತು 61 ಮಹಿಳೆಯರು ಇದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೊನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿರುವುದಿಲ್ಲ. 176 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್‍ಗಾಗಿ ಹೋಟೆಲ್‍ಗಳಿಗೆ ಕಳುಹಿಸಿಕೊಡಲಾಗಿದೆ ಎಂದು ಜಿಲ್ಲಾಕಾರಿ ತಿಳಿಸಿದ್ದಾರೆ.

# ಕೆನಡಾದ ವ್ಯಾಂಕೋವರ್‍ನಿಂದ 45 ಮಂದಿ:
ಕೋವಿಡ್-19 ಲಾಕ್‍ಡೌನ್ ಪರಿಸ್ಥಿತಿಯಲ್ಲಿ ಕೆನಡಾದ ವ್ಯಾಂಕೋವರ್‍ನಿಂದ ಇಂದು ಬೆಳಗ್ಗೆ 8.30ಕ್ಕೆ 18 ಏರ್ ಇಂಡಿಯಾ ವಿಮಾನದಲ್ಲಿ 45 ಮಂದಿ ಪುರುಷ ಪ್ರಯಾಣಿಕರು ಆಗಮಿಸಿದ್ದಾರೆ.  ನಂತರ ಏರ್ ಇಂಡಿಯಾ ವಿಮಾನವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿತು.

ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು 45 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೊನಾ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. 45 ಪ್ರಯಾಣಿಕರನ್ನು 14 ದಿನಗಳ ಕ್ವಾರಂಟೈನ್‍ಗಾಗಿ ಹೊಟೇಲ್ ಗಳಿಗೆ ಕಳುಹಿಸಿಕೊಡಲಾಗಿದೆ.

Facebook Comments

Sri Raghav

Admin