ಜೂ.6 ರಿಂದ 15 ರವರೆಗೆ 17ನೇ ಲೋಕಸಭೆಯ ಪ್ರಥಮ ಅಧಿವೇಶನ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಮೇ 27- ಹದಿನೇಳನೇ ಲೋಕಸಭೆಯ ಪ್ರಥಮ ಅಧಿವೇಶನ ಜೂ.6ರಿಂದ 15ರವರೆಗೆ ನಡೆಯಲಿದೆ. ಜೂ.6ರಂದು ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ನರೇಂದ್ರ ಮೋದಿ ಮೇ 30ರಂದು ದೆಹಲಿ ಪ್ರಧಾನಮಂತ್ರಿಯಾಗಿ 2ನೇ ಬಾರಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮರುದಿನ ಮೇ 31ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ 17ನೇ ಲೋಕಸಭೆಯ ಮೊದಲ ಅಧಿವೇಶನದ ದಿನಾಂಕವನ್ನು ಪ್ರಕಟಿಸಲಾಗುತ್ತಿದೆ.

ಅಧಿವೇಶನದ ಮೊದಲ ದಿನವೇ ಹಂಗಾಮಿ ಲೋಕಸಭಾ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ. ಅವರು ಚುನಾಯಿತರಾದ 542 ಸಂಸದರಿಗೆ ಪ್ರಮಾಣ ವಚನ ಬೋಧಿಸುವರು. ಜೂ.10ರಂದು ಲೋಕಸಭಾ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ. ನಂತರ ವಂದನಾ ನಿರ್ಣಯದ ಮೇಲೆ ಚರ್ಚೆ ನಡೆಯಲಿದ್ದು, ಪ್ರಧಾನಿ ಉತ್ತರಿಸಲಿದ್ದಾರೆ.

17ನೇ ಲೋಕಸಭೆಗೆ ಏಳು ಹಂತಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‍ಡಿಎ ಪ್ರಚಂಡ ಬಹುಮತದೊಂದಿಗೆ 2ನೇ ಬಾರಿ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮೂಲಕ ದಾಖಲೆ ನಿರ್ಮಿಸಿದೆ. ಮೋದಿ 2ನೇ ಬಾರಿ ಪ್ರಧಾನಿಯಾಗಲಿದ್ದಾರೆ.

ಪರಿಪೂರ್ಣ ಐದು ವರ್ಷಗಳನ್ನು ಪೂರೈಸಿದ ನಂತರ ಬಿಜೆಪಿ ನೇತೃತ್ವದ ಸರ್ಕಾರ ಮತ್ತೆ ಮುಂದಿನ 5 ವರ್ಷಗಳವರೆಗೆ ಆಡಳಿತ ನಡೆಸಲು ಜನಾದೇಶ ಪಡೆದಿರುವುದು ದಾಖಲೆ ಎನಿಸಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ