ರಾಜ್ಯದಲ್ಲಿ ಇಂದು ಕೊರೊನಾಗೆ ಮತ್ತೊಂದು ಬಲಿ, 18 ಮಂದಿಯಲ್ಲಿ ಸೋಂಕು ಪತ್ತೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಗುರುವಾರ ಹೊಸದಾಗಿ 18 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 445 ಕ್ಕೆ ತಲುಪಿದೆ. ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆ ಕಂಡಿದೆ.

ಗುರುವಾರಬೆಂಗಳೂರು 10, ವಿಜಯಪುರ 2, ಹುಬ್ಬಳ್ಳಿ-ಧಾರವಾಡ 2, ದಕ್ಷಿಣ ಕನ್ನಡ 1,‌ ಮಂಡ್ಯ 2 , ಕಲಬುರಗಿ 1 ಪ್ರಕರಣಗಳು ಇ ಹೊಸದಾಗಿ ದೃಢಪಟ್ಟಿವೆ. ಕಳೆದ ನಾಲ್ಕು ದಿನಗಳಲ್ಲಿ ಕೇವಲ ಎರಡು ಪ್ರಕರಣ ಮಾತ್ರ ಬೆಂಗಳೂರಿನಲ್ಲಿ ದೃಢಪಟ್ಟಿದ್ದು, 10 ಪ್ರಕರಣ ಕಂಡು ಬರುವ ಮೂಲಕ ಮತ್ತೆ ಆತಂಕ‌ ಹೆಚ್ಚಾಗುವಂತೆ ಮಾಡಿದೆ.

ಬೆಂಗಳೂರಿನ ಹೊಂಗಸಂದ್ರದ ಬಿಹಾರ ಮೂಲಕ ಕಾರ್ಮಿಕ (ರೋಗಿ ನಂಬರ್ 419) ಸಿಲಿಕಾನ್ ಸಿಟಿಗೆ ಕಂಟಕವಾಗುತ್ತಾ ಅನ್ನೋ ಅನುಮಾನಗಳು ದಟ್ಟವಾಗಿವೆ. ಕೂಲಿ ಕಾರ್ಮಿಕನ ಸಂಪರ್ಕದಲ್ಲಿದ್ದ 9 ಜನರಿಗೆ ಇಂದು ಕೊರೊನಾ ತಗುಲಿರುವುದು ದೃಢಪಟ್ಟಿದೆ. ತಡರಾತ್ರಿ ಕಾರ್ಯಚರಣೆ ನಡೆಸಿದ ಆರೋಗ್ಯ ಜಲ್ಲಾಧಿಕಾರಿಗಳು 118 ಜನರನ್ನು ಕ್ವಾರಂಟೈನ್ ಮಾಡಿದ್ದಾರೆ.

ನಂಜನಗೂಡಿನ ರೋಗಿ ನಂಬರ್ 52ರಂತೆ ಬಿಹಾರ ಕಾರ್ಮಿಕ ಬೆಂಗಳೂರಿಗೆ ಕಂಟಕವಾಗುವ ಸಾಧ್ಯತೆಗಳಿವೆ. ಸೋಂಕು ತಗುಲಿದ ಬಳಿಕ ಕಾರ್ಮಿಕ ಆಟೋದಲ್ಲಿ ಹೊಂಗಸಂದ್ರದ ವೇಣು ಕ್ಲಿನಿಕ್, ಜಯದೇವ ಆಸ್ಪತ್ರೆ ಮತ್ತು ವಿಕ್ಟೋರಿಯಾ ಆಸ್ಪತ್ರೆಗಳಿಗೆ ತೆರಳಿದ್ದಾನೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್, ಕರ್ನಾಟಕದ ಎಲ್ಲಾ ಮೆಡಿಕಲ್ ಸ್ಟೋರ್ಸ್, ಆಸ್ಪತ್ರೆಯ ಫಾರ್ಮಸಿಸ್ ಅವರು ಔಷಧಿ ಕೊಡುವಾಗ ಆಡ್ರೆಸ್, ಮೊಬೈಲ್ ನಂಬರ್ ಕಲೆಕ್ಟ್ ಮಾಡಲು ಸೂಚನೆ ಕೊಡಲಾಗಿದೆ.

ಕೆಮ್ಮು, ನಗಡಿ, ಗಂಟಲು ನೋವಿಗೆ ಕೊಡುವಾಗ ಕಲೆಕ್ಟ್ ಮಾಡಬೇಕು. ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ವರದಿ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ. ಮಂಗಳೂರಿನ ಕೊವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 78 ವರ್ಷದ ವೃದ್ಧೆ ಇಂದು ಸಂಜೆ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ. ಇಂದು ಮೃತಪಟ್ಟ ವೃದ್ಧೆಯ ಸೊಸೆ ಏಪ್ರಿಲ್ 18 ರಂದು ಕೊರೋನಾ ವೈರಸ್ ಬಲಿಯಾಗಿದ್ದರು.

ಬಂಟ್ವಾಳದ ಕೊರೊನಾ ಸೋಂಕಿತ ಮಹಿಳೆ ಏಪ್ರಿಲ್ 19ರಂದು ಮೃತರಾಗಿದ್ದರು. ಈ ಬೆನ್ನಲ್ಲೇ ಕೊರೊನಾ ಸೋಂಕು ದೃಢಪಟ್ಟು ಚಿಕಿತ್ಸೆ ಪಡೆಯುತ್ತಿದ್ದ ಮೃತ ಮಹಿಳೆಯ ಅತ್ತೆ ಕೂಡ ಇಂದು ಮೃತಪಟ್ಟಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಎರಡನೇ ಸಾವು ಇದಾಗಿದೆ.

75 ವರ್ಷದ ವೃದ್ಧೆ ಏಪ್ರಿಲ್ 18ರಿಂದ ಪಾರ್ಶ್ವವಾಯುಗೆ ಸಂಬಂಧಿಸಿದಂತೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆ ಅವರನ್ನು ಮಂಗಳೂರಿನ ಕೋವಿಡ್-19 ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೆ ಸಾವನ್ನಪ್ಪಿದ್ದಾರೆ.

ವೃದ್ಧೆಗೆ ಸೋಂಕು ತಗುಲಿರುವುದು ದೃಢಪಡುತ್ತಿದ್ದಂತೆ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆ ಏರಿಯಾವನ್ನು ಕ್ವಾರಂಟೈನ್ ಮಾಡಲಾಗಿದೆ. ಈವರೆಗೆ ಒಟ್ಟು 17 ಸೋಂಕಿತರು ಮೃತಪಟ್ಟಿದ್ದರೆ, 145 ರೋಗಿಗಳು ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ರೋಗಿ-101, 273, 349, 369, 409 ಐದು ರೋಗಿಗಳನ್ನು ಐಸಿಯುವಲ್ಲಿ ಇರಿಸಿ‌ ಚಿಕಿತ್ಸೆ ನೀಡಲಾಗುತ್ತಿದೆ.

Facebook Comments

Sri Raghav

Admin