BREAKING : ರಾಜ್ಯದಲ್ಲಿ ಹದ್ದುಮೀರಿದ ಕೊರೋನಾ, ಇಂದು ಬರೋಬ್ಬರಿ 1839 ಮಂದಿಗೆ ಪಾಸಿಟಿವ್, ಸಾವಿನ ಸಂಖ್ಯೆ ಡಬಲ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಮಹಾಮಾರಿರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್​ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 1,839 ಜನರಿಗೆ ಹೊಸದಾಗಿ ಕೋವಿಡ್​ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 21,549ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆ ಅವಧಿಯಲ್ಲಿ 42 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸಾವಿನ ಸಂಖ್ಯೆ 335 ಮುಟ್ಟಿದೆ. ಬೆಂಗಳೂರಿನಲ್ಲಿ 24, ಬೀದರ್ 6, ಬೆಂಗಳೂರು ಗ್ರಾಮಾಂತರ 1, ಧಾರವಾಡ 3, ದಕ್ಷಿಣ ಕನ್ನಡ 4, ಕಲಬುರಗಿ 3 ಮತ್ತು ಹಾಸನದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲೇ 1172 ಜನರಿಗೆ ಮಹಾಮಾರಿ ಕಾಣಿಸಿಕೊಂಡಿದೆ. ಇಂದು 439 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 11,966 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೂ 9,244 ಮಂದಿ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಕೊರೊನಾಗೆ ಬಲಿಯಾದವರ ಸಂಖ್ಯೆ 335ಕ್ಕೆ ತಲುಪಿದ್ದು, ಐಸಿಯುನಲ್ಲಿ 226 ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಇಂದು ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿದ ಬುಲೆಟಿನ್ ಪ್ರಕಾರ, ಬೆಂಗಳೂರು ನಗರ 1,172, ದಕ್ಷಿಣ ಕನ್ನಡ 75, ಬಳ್ಳಾರಿ 73, ಬೀದರ್ 51, ಧಾರವಾಡ 45, ರಾಯಚೂರು 41, ಮೈಸೂರು 38, ಕಲಬುರಗಿ 37, ವಿಜಯಪುರ 37, ಮಂಡ್ಯ 35, ಉತ್ತರ ಕನ್ನಡ 35, ಶಿವಮೊಗ್ಗ 31, ಹಾವೇರಿ 28,

ಬೆಳಗಾವಿ 27, ಹಾಸನ 25, ಉಡುಪಿ 18, ಚಿಕ್ಕಬಳ್ಳಾಪುರ 12, ತುಮಕೂರು 12, ಬೆಂಗಳೂರು ಗ್ರಾಮಾಂತರ 11, ಕೋಲಾರ 11, ದಾವಣಗೆರೆ 7, ಚಾಮರಾಜನಗರ 5, ಗದಗ 4, ಕೊಪ್ಪಳ 3, ಚಿಕ್ಕಮಗಳೂರು 3, ರಾಮನಗರ 2 ಮತ್ತು ಯಾದಗಿರಿಯಲ್ಲಿ 1 ಪ್ರಕರಣ ಬೆಳಕಿಗೆ ಬಂದಿದೆ.

ಇಂದು ಒಟ್ಟು 42 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.   ದಕ್ಷಿಣ ಕನ್ನಡ, ಬಳ್ಳಾರಿ, ಬೀದರ್, ಧಾರವಾಡ ಮೊದಲಾದ ಜಿಲ್ಲೆಗಳಲ್ಲೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆದರೆ, ಬೆಂಗಳೂರಿನಲ್ಲಿ ಕೊರೋನಾ ಅಕ್ಷರಶಃ ರುದ್ರತಾಂಡವವಾಡುತ್ತಿದೆ. ಗಲ್ಲಿಗಲ್ಲಿಗಳಲ್ಲೂ ಈಗ ಕೊರೋನಾ ಹೊಕ್ಕಿದೆ.

ಈವರೆಗೆ 9244 ಮಂದಿ ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆದಂತಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಆಕ್ಟಿವ್ ಕೊರೊನಾ ಪ್ರಕರಣಗಳ ಸಂಖ್ಯೆ 11,966 ಇದೆ.

 

Facebook Comments

Sri Raghav

Admin