ಕೊರೋನಾ ಬುಲೆಟಿನ್ : ರಾಜ್ಯದಲ್ಲಿ ಇಂದು 1925 ಮಂದಿಗೆ ಪಾಸಿಟಿವ್ , 37 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಮಹಾಮಾರಿರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್​ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಕಳೆದೊಂದು ವಾರದಿಂದ ಪ್ರತಿದಿನ ಸಾವಿರಕ್ಕೂ ಹೆಚ್ಚು ಕೇಸ್ ಗಳು ದಾಖಲಾಗುತ್ತಿವೆ.

ಕೂಡ ಕೂಡ ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದ್ದು, ಒಂದೇ ದಿನ 1925 ಜನರಿಗೆ ಹೊಸದಾಗಿ ಕೋವಿಡ್​ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 23474ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆ ಅವಧಿಯಲ್ಲಿ 37 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸಾವಿನ ಸಂಖ್ಯೆ 372 ಕ್ಕೆಏರಿಕೆಯಾಗಿದೆ. ಬೆಂಗಳೂರಿನಲ್ಲೇ 1235 ಜನರಿಗೆ ಮಹಾಮಾರಿ ಕಾಣಿಸಿಕೊಂಡಿದೆ. ಇಂದು 302 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ರಾಜ್ಯದಲ್ಲಿ 13251 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೂ 9847 ಮಂದಿ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಕೊರೊನಾಗೆ ಬಲಿಯಾದವರ ಸಂಖ್ಯೆ 372ಕ್ಕೆ ತಲುಪಿದ್ದು, ಐಸಿಯುನಲ್ಲಿ 243 ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Facebook Comments

Sri Raghav

Admin