ರಾಜ್ಯದಲ್ಲಿಂದು ಕೊರೋನಾಗೆ 194 ಮಂದಿ ಬಲಿ, 11042 ಹೊಸ ಕೇಸ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಕ್ರಮಣವಾಗಿ ಕಡಿಮೆಯಾಗುತ್ತಿದ್ದು ರಾಜ್ಯದಾದ್ಯಂತ ಕಳೆದ 24 ಗಂಟೆಯಲ್ಲಿ 194 ಪ್ರಾಣ ಕಳೆದುಕೊಂಡಿದ್ದಾರೆ, ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 11042 ಹೊಸ ಕೇಸ್ ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2739290 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 32485ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 2191 ಜನರಿಗೆ ಕೊರೋನಾ ತಗುಲಿದೆ, ನಗರದಲ್ಲಿ ಇಂದು 47 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 1191732 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ ಒಟ್ಟು 15215 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು ರಾಜ್ಯಾದ್ಯಂತ 15721 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 2496132 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 6.58% ರಷ್ಟಿದೆ.

ಜಿಲ್ಲಾವಾರು ಸೋಂಕಿತ ಸಂಖ್ಯೆ ಕೆಳಕಂಡಂತಿದೆ :

Facebook Comments

Sri Raghav

Admin