ಹಕ್ಕು ಚಲಾಯಿಸಿದ ಲೀಡರ್ಸ್, ಯಾರ‍್ಯಾರು ಎಲ್ಲೆಲ್ಲಿ ಮತದಾನ ಮಾಡಿದರು..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.18- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಡಿ.ವಿ.ಸದಾನಂದಗೌಡ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ, ವೀರಪ್ಪ ಮೊಯ್ಲಿ, ನಟರಾದ ಪುನೀತ್,ರಾಜ್ಯಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ವಿಧಾನ ಪರಿಷತ್ ಸಭಾಪತಿ ಕೆ.ಪ್ರತಾಪ್‍ಚಂದ್ರ ಶೆಟ್ಟಿ, ಸೇರಿದಂತೆ ಪ್ರಮುಖ ಗಣ್ಯರು ಇಂದು ಮತದಾನ ಮಾಡಿದರು,

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ಮತಗಟ್ಟೆಯಲ್ಲಿ ದೇವೇಗೌಡರು ಪತ್ನಿ ಚೆನ್ನಮ್ಮ ದೇವೇಗೌಡರೊಂದಿಗೆ ಮತದಾನ ಮಾಡಿದರು. ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಕೂಡಕುಟುಂಬದ ಸದಸ್ಯರೊಂದಿಗೆ ಮತದಾನ ಮಾಡಿದರು.

ರಾಮನಗರ ತಾಲ್ಲೂಕಿನ ಕೇತಿಗಾನಹಳ್ಳಿಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಮತದಾನ ಮಾಡಿದರು. ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನ ಲಾರೆನ್ಸ್ ಇಂಗ್ಲೀಷ್ ಶಾಲೆಯಲ್ಲಿ ಮತದಾನ ಮಾಡಿದರು.

ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಜಯನಗರದಲ್ಲಿ, ಡಿ.ವಿ.ಸದಾನಂದಗೌಡವರು ಭೂಪಸಂದ್ರದಲ್ಲಿ ಮತದಾನ ಮಾಡಿದರು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತಮ್ಮ ಪತ್ನಿಯೊಂದಿಗೆ ತುಮಕೂರಿನ ಸಿದ್ಧಾರ್ಥ ನಗರದ ಸರ್ಕಾರಿ ಶಾಲೆಯಲ್ಲಿ ಮತ ಚಲಾಯಿಸಿದರು.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೈಸೂರು ಜಿಲ್ಲೆಯ ಸಿದ್ಧರಾಮನ ಹುಂಡಿಯಲ್ಲಿ ಮತದಾನ ಮಾಡಿದರೆ, ಸಂಸದ ವೀರಪ್ಪ ಮೋಯ್ಲಿ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಚಿಕ್ಕಬಳ್ಳಾಪುರದಲ್ಲಿ ಮತದಾನ ಮಾಡಿದರು. ಇನ್ಪೋಸಿಸ್‍ನ ಮುಖ್ಯಸ್ಥ ನಾರಾಯಣಮೂರ್ತಿ ಅವರು ತಮ್ಮಪತ್ನಿ ಸುಧಾಮೂರ್ತಿ ಅರೊಂದಿಗೆ ಮತ ಚಲಾಯಿಸಿದರು.

ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯಲ್ಲಿ ಮತದಾನ ಮಾಡಿದರು. ಮಾಜಿ ಸಚಿವ ರಾಮಲಿಂಗಾರೆಡ್ಡಿ, ಶಾಸಕಿ ಸೌಮ್ಯರೆಡ್ಡಿ ಅವರು ಬೆಂಗಳೂರಿನ ಲಕ್ಕಸಂದ್ರದಲ್ಲಿ ಮತದಾನ ಮಾಡಿದರು.

ಸಚಿವರಾದ ಕೆ.ಜೆ.ಜಾರ್ಜ್ ಅವರು ಸಿ.ವಿ.ರಾಮನ್ ನಗರದಲ್ಲಿ, ಜಯಮಾಲ ಡಾಲರ್ಸ್ ಕಾಲೋನಿಯಲ್ಲಿ, ಮಾಜಿ ಸಚಿವ ಬಿ.ಎನ್.ಬಚ್ಚೇಗೌಡ ಅವರು ತಮ್ಮ ಪತ್ನಿಯೊಂದಿಗೆ ಹೊಸಕೋಟೆಯಲ್ಲಿ ಮತದಾನ ಮಾಡಿದರು. ಮಾಜಿ ಸಚಿವ ಅರವಿಂದ ಲಿಂಬಾವಳಿ ಹೊಸ ತಿಪ್ಪಸಂದ್ರದಲ್ಲಿ ಮತದಾನ ಮಾಡಿದರು.

ನಟರಾದ ಪುನೀತ್ ರಾಜ್‍ಕುಮಾರ್, ರಾಘವೇಂದ್ರ ರಾಜ್‍ಕುಮಾರ್, ಶಿವರಾಜ್‍ಕುಮಾರ್, ಜಗ್ಗೇಶ್, ಪ್ರೇಮ್,ರಕ್ಷಿತಾ, ತಾರಾ, ರಮೇಶ್ ಅರವಿಂದ್, ಉಪೇಂದ್ರ, ಅಮೂಲ್ಯ, ಗಣೇಶ್, ಪ್ರಕಾಶ್ ರಾಜ್ ಸೇರಿದಂತೆ ನಟ, ನಟಿಯರು ಬೆಂಗಳೂರಿನಲ್ಲಿ ತಮ್ಮ ಮತದಾನದ ಹಕ್ಕು ಚಲಾಯಿಸಿದರು.

ಪ್ರಮುಖ ರಾಜಕಾರಣಿಗಳು, ನಟ, ನಟಿಯರು, ವಿವಿಧ ಕ್ಷೇತ್ರಗಳ ಗಣ್ಯರು, ಸಾಹಿತಿಗಳು, ಕಲಾವಿದರು, ಅಧಿಕಾರಿಗಳು, ಸೇರಿದಂತೆ ಪ್ರಮುಖ ಗಣ್ಯರು ಮತದಾನ ಮಾಡಿದರು.

 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ