2ನೇ ಟೆಸ್ಟ್ ಗೆ ಮೂರನೇ ವೃದ್ಧಿಮಾನ್ ಸಹಾ ಅಲಭ್ಯ : ಪಾರ್ಥೀವ್ ಪಟೇಲ್‍ಗೆ ಬುಲಾವ್

ಈ ಸುದ್ದಿಯನ್ನು ಶೇರ್ ಮಾಡಿ

Partiv-Patel

ಮೊಹಾಲಿ,ನ.23– ಕಾಲು ನೋವಿನಿಂದ ಬಳಲುತ್ತಿರುವ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಇಂಗ್ಲೆಂಡ್ ವಿರುದ್ಧ ನಡೆಯುವ ಮೂರನೇ ಟೆಸ್ಟ್ ನಿಂದ ಹೊರಗುಳಿದಿದ್ದಾರೆ. ಅವರ ಸ್ಥಾನಕ್ಕೆ ಮತ್ತೊಬ್ಬ ವಿಕೆಟ್ ಕೀಪರ್ ಪಾರ್ಥೀವ್ ಪಟೇಲ್ ಅವರನ್ನು ಸೇರಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.  ವಿಶಾಖಪಟ್ಟಣಂನಲ್ಲಿ ಇಂಗ್ಲೆಂಡ್ ಮತ್ತು ಭಾರತ ನಡುವೆ 2ನೇ ಟೆಸ್ಟ್ ನಲ್ಲಿ ಆಡುವಾಗ ಸಹಾ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಬಿಸಿಸಿಐನ ವೈದ್ಯಕೀಯ ತಂಡ ತಪಾಸಣೆ ನಡೆಸಿ ವಿಶ್ರಾಂತಿ ತೆಗೆದುಕೊಳ್ಳಬೇಕೆಂದು ಸಲಹೆ ನೀಡಿರುವ ಹಿನ್ನೆಲೆಯಲ್ಲಿ ವೃದ್ಧಿಮಾನ್ ಸಹಾ 3ನೇ ಟೆಸ್ಟ್‍ನಿಂದ ಹೊರಗುಳಿದಿದ್ದಾರೆ.

ಎಂಟು ವರ್ಷದ ಬಳಿಕ ಪಾರ್ಥೀವ್ ಪಟೇಲ್ ಭಾರತ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. 2008ರಲ್ಲಿ ಕೊಲೊಂಬೊದಲ್ಲಿ ಶ್ರೀಲಂಕಾ ವಿರುದ್ಧ ಕೊನೆಯ ಟೆಸ್ಟ್ ಆಡಿದ್ದರು.

<  ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… : ಪರಿಚಯಿಸುತ್ತಿದ್ದೇವೆ Eesanje News 24/7 ನ್ಯೂಸ್ ಆ್ಯಪ್ –  Click Here to Download >

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin