2ನೇ ಶ್ರೇಣಿಯ ನಗರಗಳಲ್ಲಿ ಐಟಿ ಪಾರ್ಕ್ ಸ್ಥಾಪನೆ : ಪ್ರಿಯಾಂಕ್ ಖರ್ಗೆ

ಈ ಸುದ್ದಿಯನ್ನು ಶೇರ್ ಮಾಡಿ

Priyank-Kharghe

ಬೆಂಗಳೂರು, ಮಾ. 23- ಮಂಗಳೂರು- ಮೈಸೂರು ನಂತಹ ಎರಡನೇ ಶ್ರೇಣಿಯ ನಗರಗಳಲ್ಲಿ ಶೀಘ್ರವಾಗಿ ಐಟಿ ಪಾರ್ಕ್ ಸ್ಥಾಪಿಸಲು ಕ್ರಮಕೈಗೊಳ್ಳುವದಾಗಿ ಮಾಹಿತಿ ತಂತ್ರಜ್ಞಾನ ಹಾಗೂ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿಆ ಡಳಿತ ಪಕ್ಷ ಶಾಸಕ ಮೊಹಿದ್ದೀನ್ ಬಾವಾ ಮಾತನಾಡಿ, ಬೆಂಗಳೂರನ್ನು ಮಾತ್ರ ಕೇಂದ್ರವಾಗಿಟ್ಟುಕೊಂಡು ಐಟಿ ಉದ್ಯಮ ಬೆಳೆಸಿದರೆ ಸಾಲದು. ಮಂಗಳೂರಿನಂತಹ 2ನೆ ಶ್ರೇಣಿ ನಗರಗಳಲ್ಲೂ ಐಟಿ ಪಾರ್ಕ್ ಸ್ಥಾಪಿಸಬೇಕು. ಬಹಳಷ್ಟು ಉದ್ಯಮಿಗಳು ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ಆದರೆ ಅಗತ್ಯ ಮೂಲಸೌಲಭ್ಯವಿಲ್ಲದೆ ಹಿಂದೇಟು ಹಾಕುತ್ತಿದ್ದಾರೆ. ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳು ಸಾಲುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಅಭಿವೃದ್ಧಿ ವಿಷಯದಲ್ಲಿ ಏನೆಲ್ಲಾ ಸಾಧ್ಯವೋ ಅಷ್ಟನ್ನು ಸರ್ಕಾರ ಮಾಡುತ್ತದೆ. ಬೆಂಗಳೂರಿನಂತೆ ಇತರ ಮೈಸೂರು, ಮಂಗಳೂರು, ಧಾರವಾಡ ನಗರಗಳಲ್ಲಿ ಐಟಿ ಪಾರ್ಕ್ ಸ್ಥಾಪಿಸಲು ಕ್ರಮಕೈಗೊಳ್ಳಲಾಗಿದೆ. ಆಯಾ ನಗರಗಳ ಸ್ವರೂಪಕ್ಕೆ ಅನುಗುಣವಾಗಿ ಐಟಿ ಪಾರ್ಕ್ ವಿನ್ಯಾಸಗೊಳಿಸಲಾಗುವುದು. ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಸಕರು, ಜನಪ್ರತಿನಿಧಿಗಳ ಜೊತೆ ಚರ್ಚಿಸಿ ಐಟಿ ಪಾರ್ಕ್‍ಗಳನ್ನು ಅಭಿವೃದ್ದಿ ಪಡಿಸಲು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin