2 ದಿನಗಳ ಭೇಟಿಗಾಗಿ ಬೆಂಗಳೂರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್

ಈ ಸುದ್ದಿಯನ್ನು ಶೇರ್ ಮಾಡಿ

Ramanath-Kovind

ಬೆಂಗಳೂರು,ಡಿ.29-ಎರಡು ದಿನಗಳ ಅಧಿಕೃತ ಭೇಟಿಗಾಗಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಇಂದು ಸಂಜೆ ನಗರಕ್ಕೆ ಆಗಮಿಸಲಿದ್ದಾರೆ. ಭಾರತೀಯ ವಾಯುಸೇನೆಯ ವಿಶೇಷ ವಿಮಾನದಲ್ಲಿ ಆಗಮಿಸುವ ರಾಷ್ಟ್ರಪತಿಗಳು ರಾಜಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ ನಿಮ್ಹಾನ್ಸ್‍ನ 22ನೇ ಘಟಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ನಂತರ ನ್ಯಾಷನಲ್ ಎಜುಕೇಷನ್ ಸೊಸೈಟಿಯ ಶತಮಾನೋತ್ಸವ ಹಾಗೂ ಅದಮ್ಯಚೇತನ ಸೇವಾ ಉತ್ಸವದಲ್ಲಿ ರಾಷ್ಟ್ರಪತಿಗಳು ಪಾಲ್ಗೊಳ್ಳುವ ಕಾರ್ಯಕ್ರಮವಿದೆ.

Facebook Comments

Sri Raghav

Admin