2 ಲಕ್ಷ ವೆಚ್ಚದ ಹೈಮಾಸ್ಕ್ ದೀಪಕ್ಕೆ ವೈ.ಎಸ್.ವಿ. ದತ್ತ ಚಾಲನೆ

ಈ ಸುದ್ದಿಯನ್ನು ಶೇರ್ ಮಾಡಿ

datta-2
ಕಡೂರು, ಮೇ 16- ತಾಲೂಕಿನ ಪಟ್ಟಣಗೆರೆ ಗ್ರಾಪಂ ವ್ಯಾಪ್ತಿಯ ಆಲಘಟ್ಟ ಗ್ರಾಮದಲ್ಲಿ ಸುಮಾರು ಎರಡೂವರೆ ಲಕ್ಷ ರೂ. ವೆಚ್ಚದ ಹೈಮಾಸ್ಕ್ ವಿದ್ಯುತ್ ದೀಪ ಬೆಳಗಿಸುವುದರ ಮೂಲಕ ಶಾಸಕ ವೈ.ಎಸ್.ವಿ. ದತ್ತ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಗ್ರಾಮದ ಆಂಜನೇಯಸ್ವಾಮಿ ದೇವಾಲಯದ ನಿರ್ಮಾಣಕ್ಕಾಗಿ ವೈಯಕ್ತಿಕವಾಗಿ ಐವತ್ತು ಸಾವಿರ ರೂ.ಗಳನ್ನು ನೀಡಲಾಗಿದೆ. ಹೈಮಾಸ್ಕ್ ವಿದ್ಯುತ್ ದೀಪ ಅಳವಡಿಸಲು ಎರಡೂವರೆ ಲಕ್ಷ ರೂ.ಗಳನ್ನು ನೀಡಲಾಗಿದ್ದು, ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಅನುದಾನ ಐದು ಲಕ್ಷ ರೂಗಳ ಕಾಮಗಾರಿ ಈಗಾಗಲೇ ಮುಗಿದಿದೆ ಎಂದರು.
ದೇವಾಲಯದ ಕಾಂಪೌಂಡ್ ನಿರ್ಮಾಣಕ್ಕೆ ಶಾಸಕರ ಅನುದಾನದಲ್ಲಿ ಹಣ ನೀಡಲಾಗುವುದು. ದೇವಾಲಯ ಉದ್ಘಾಟನೆಗೆ ಸಾರ್ವಜನಿಕರಿಗೆ ದಾಸೋಹದ ವ್ಯವಸ್ಥೆಗೆ ವೈಯಕ್ತಿಕವಾಗಿ ಐವತ್ತು ಸಾವಿರ ರೂ. ನೀಡಲಾಗುವುದು. ಈ ಸಮಾರಂಭಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಕರೆತರಲಾಗುವುದು ಎಂದು ತಿಳಿಸಿದರು. ಕೆ.ಎಂ. ಮಹೇಶ್ವರಪ್ಪ, ಜಿಗಣೇಹಳ್ಳಿ ನೀಲಕಂಠಪ್ಪ, ಮೀರಾ, ಹುಚ್ಚಪ್ಪ, ಮಂಜುನಾಥ್, ಗೋವಿಂದಪ್ಪ ಇತರರು ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin