ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 2.94 ಕೋಟಿ ವಶ..!

ಈ ಸುದ್ದಿಯನ್ನು ಶೇರ್ ಮಾಡಿ

ಕೋಲಾರ, ಸೆ.2- ಕೊರೊನಾ ಸಂಕಷ್ಟದ ಸಮಯದಲ್ಲಿ ಬರೋಬ್ಬರಿ 2.94 ಕೋಟಿ ರೂ. ಹಣವನ್ನು ಸಾಗಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಕೋಲಾರ ಮೂಲದ ಚಂದ್ರು ಮತ್ತು ಅಮರ್‍ನಾಥ್ ಪೊಲೀಸರ ವಶದಲ್ಲಿ ರುವವರು. ಈ ಹಣಕ್ಕೆ ಯಾವುದೇ ಸೂಕ್ತ ದಾಖಲೆ ಇಲ್ಲದೆ ಈ ಇಬ್ಬರು ಕಾರಿನಲ್ಲಿ ಹಣ ಸಾಗಿ ಸುತ್ತಿದ್ದರು.

ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕೋಲಾರ ಜಿಲ್ಲೆ, ಶ್ರೀನಿವಾಸಪುರ ತಾಲ್ಲೂಕು ರೋಜರಹಳ್ಳಿ ಗೇಟ್ ಬಳಿ ವಾಹನ ತಡೆದು ಪರಿಶೀಲಿಸಿದಾಗ ಭಾರೀ ಮೊತ್ತದ ಹಣ ಪತ್ತೆಯಾಗಿದೆ. ತಕ್ಷಣ ವಾಹನದಲ್ಲಿದ್ದ ಇಬ್ಬರನ್ನು ಹಾಗೂ ಹಣವನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಸ್ಥಳಕ್ಕೆ ಕೋಲಾರ ಎಸ್‍ಪಿ ಕಾರ್ತಿಕ್‍ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಬಗ್ಗೆ ಶ್ರೀನಿವಾಸಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈ ಹಣ ಯಾರಿಗೆ ಸೇರಿದ್ದು, ಇಷ್ಟೊಂದು ದೊಡ್ಡ ಮೊತ್ತದ ಹಣವನ್ನು ಎಲ್ಲಿಂದ ಎಲ್ಲಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು, ಯಾವ ಕಾರಣಕ್ಕೆ ಒಯ್ಯಲಾಗುತ್ತಿತ್ತು ಎಂಬಿತ್ಯಾದಿ ಮಾಹಿತಿಗಳನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

Facebook Comments