ಬೆಂಗಳೂರಲ್ಲಿ ಮತ್ತೊಂದು ಅಗ್ನಿ ದುರಂತ, ಪಟಾಕಿ ಸ್ಪೋಟದಲ್ಲಿ ಇಬ್ಬರ ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.23- ದೇವರಚಿಕ್ಕನಹಳ್ಳಿಯ ಘಟನೆ ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಇಬ್ಬರು ಮೃತಪಟ್ಟು , ನಾಲ್ವರು ಗಾಯಗೊಂಡಿದ್ದಾರೆ.ಸೋಟದಿಂದ ಮನೋಹರ್ ಮತ್ತು ಅಸ್ಲಾಂಪಾಷಾ ಎಂಬುವರು ಮೃತಪಟ್ಟಿದ್ದಾರೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ದಕ್ಷಿಣ ವಿಭಾಗ ಡಿಸಿಪಿ ಹರೀಶ್ ಪಾಂಡೆ ಅವರು ಈ ಸಂಜೆಗೆ ತಿಳಿಸಿದ್ದಾರೆ.

ಎನ್‍ಟಿ ಪೇಟೆಯ ನಾಲ್ಕನೆ ಮುಖ್ಯ ರಸ್ತೆಯಲ್ಲಿ ಲಾರಿ ಟ್ರಾನ್ಸ್‍ಸ್ಪೋರ್ಟ್ ಗೋದಾಮು ಇದೆ. ಈ ಗೋದಾಮಿನಲ್ಲಿ 60 ಬಾಕ್ಸ್ ಪಟಾಕಿಗಳಿದ್ದು, 2 ಬಾಕ್ಸ್‍ಗಳಲ್ಲಿದ್ದ ಪಟಾಕಿಗಳು ಸೋಟಗೊಂಡಿದೆ ಎಂದು ತಿಳಿದುಬಂದಿದೆ.
ಮಧ್ಯಾಹ್ನ 12.30ರ ಸುಮಾರಿನಲ್ಲಿ ಈ ಘಟನೆ ಸಂಭವಿಸಿದ್ದು, ಮೃತರ ಇಬ್ಬರ ದೇಹಗಳು ಛಿದ್ರಛಿದ್ರವಾಗಿವೆ.

ಸೋಟದ ತೀವ್ರತೆಯಿಂದ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿವೆ. ಗೋದಾಮಿನ ಮುಂದೆ ಹಾಗೂ ಅಕ್ಕಪಕ್ಕ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಒಂದು ಟಾಟಾ ಎಸ್ ವಾಹನದ ಗ್ಲಾಸ್‍ಗಳು ಸಹ ಒಡೆದು ಹೋಗಿವೆ.ಸುದ್ದಿ ತಿಳಿಯುತ್ತಿದಂತೆ ವಿವಿ ಪುರಂ ಠಾಣೆ ಪೊಲೀಸರು, ಅಗ್ನಿ ಶಾಮಕ ದಳ ಸ್ಥಳಕ್ಕೆ ದೌಡಾಯಿಸಿ ಮುಂದಿನ ಕ್ರಮ ಕೈಗೊಂಡು ಪರಿಶೀಲನೆ ನಡೆಸುತ್ತಿದ್ದಾರೆ.

ಪಟಾಕಿ ಸೋಟಕ್ಕೆ ಕಾರಣ ಏನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಸ್ಥಳಕ್ಕೆ ಎಫ್‍ಎಸ್‍ಎಲ್ ಅಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಈ ಬಗ್ಗೆ ವಿವಿ ಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Facebook Comments

Sri Raghav

Admin