ಸದನಕ್ಕೆ ಇಂದೂ ಕೂಡ 20 ಶಾಸಕರು ಗೈರು, 10 ಶಾಸಕರಿಗೆ ಸ್ಪೀಕರ್ ತುರ್ತು ನೋಟಿಸ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.22- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡಿಸಿರುವ ವಿಶ್ವಾಸಮತಯಾಚನೆ ನಿರ್ಣಯದ ಮೇಲಿನ ಚರ್ಚೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಈತನಕ ರಾಜೀನಾಮೆ ನೀಡಿರುವ ಶಾಸಕರೂ ಸೇರಿದಂತೆ 20 ಶಾಸಕರು ಹಾಜರಾಗಿರಲಿಲ್ಲ.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಬೆಂಬಲ ಸೂಚಿಸಿರುವ ಬಿಎಸ್‍ಪಿ ಶಾಸಕ ಎನ್.ಮಹೇಶ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಗೇಂದ್ರ ಮತ್ತು ಶ್ರೀಮಂತ್‍ಪಾಟೀಲ್ ಹಾಗೂ ಇಬ್ಬರು ಪಕ್ಷೇತರ ಶಾಸಕರು ಸದನಕ್ಕೆ ಹಾಜರಾಗಿರಲಿಲ್ಲ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್-ಜೆಡಿಎಸ್ ಶಾಸಕರಾದ ಆನಂದ್‍ಸಿಂಗ್, ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಪ್ರತಾಪ್‍ಗೌಡ ಪಾಟೀಲ್, ಬಿ.ಸಿ.ಪಾಟೀಲ್, ಎಂ.ಟಿ.ಬಿ.ನಾಗರಾಜ್, ಡಾ.ಸುಧಾಕರ್, ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮೇಶಖರ್, ಬೈರತಿ ಬಸವರಾಜು, ಮುನಿರತ್ನ, ರೋಷನ್ ಬೇಗ್, ಎಚ್.ವಿಶ್ವನಾಥ್, ನಾರಾಯಣಗೌಡ ಹಾಗೂ ಗೋಪಾಲಯ್ಯ ಅವರು ಕೂಡ ಸದನದಲ್ಲಿ ಭಾಗವಹಿಸಿರಲಿಲ್ಲ.

10 ಶಾಸಕರ ಅನರ್ಹತೆ ವಿಚಾರ ಕುರಿತು ತುರ್ತು ನೋಟಿಸ್
ಸಮ್ಮಿಶ್ರ ಸರ್ಕಾರ ಪತನದ ಅಂಚಿನರಲ್ಲಿರುವ ಸಂದರ್ಭದಲ್ಲೇ ಸ್ಪೀಕರ್ ರಮೇಶ್‍ಕುಮಾರ್ ಅವರು ಕಾಂಗ್ರೆಸ್‍ನ 10 ಮಂದಿ ಶಾಸಕರ ಅನರ್ಹತೆ ವಿಚಾರ ಕುರಿತು ತುರ್ತು ನೋಟಿಸ್ ಜಾರಿ ಮಾಡಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಅವರು ಜು.11ರಂದು ಮತ್ತು ಜು.18ರಂದು ಎರಡು ಹಂತದಲ್ಲಿ ಸ್ಪೀಕರ್ ಅವರಿಗೆ ದೂರು ನೀಡಿದ್ದು, ಪಕ್ಷದ ಶಿಸ್ತು ಉಲ್ಲಂಘಿಸಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಶಾಸಕರಾದ ರಮೇಶ್‍ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಪ್ರತಾಪ್‍ಗೌಡ ಪಾಟೀಲ್, ಬಿ.ಸಿ.ಪಾಟೀಲ್, ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮಶೇಖರ್, ಬೈರತಿ ಬಸವರಾಜ್, ಮುನಿರತ್ನ, ಸುಧಾಕರ್ ಹಾಗೂ ಎಂ.ಟಿ.ಬಿ.ನಾಗರಾಜ್ ಅವರುಗಳನ್ನು ಅನರ್ಹಗೊಳಿಸುವಂತೆ ದೂರು ನೀಡಿದ್ದರು.

ದೂರು ಆಧರಿಸಿ ಜು.18ರಂದು ತುರ್ತು ನೋಟಿಸ್ ನೀಡಿರುವ ಸ್ಪೀಕರ್ ಅವರು ಮೂರು ದಿನಗಳ ಒಳಗಾಗಿ ನೋಟಿಸ್‍ಗೆ ಉತ್ತರ ನೀಡಬೇಕು ಮತ್ತು ನಾಳೆ (ಜು.23) ವಿಧಾನಸೌಧದ ಮೊದಲ ಮಹಡಿಯ 119ರ ಸಂಖ್ಯೆಯ ಕೊಠಡಿಯಲ್ಲಿ ನಡೆಯುವ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಿದ್ದಾರೆ.

10 ಷೆಡ್ಯೂಲ್ ಕರ್ನಾಟಕ ವಿಧಾನಸಭೆಯ ನಿಯಮಾವಳಿ 6ರ ಅನುಸಾರ ಅನರ್ಹತೆ ಪ್ರಕರಣ ಕುರಿತು ವಿಚಾರಣೆ ನಡೆಯಲಿದ್ದು, ಖುದ್ದಾಗಿ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin