2017ರ ಸಿಇಟಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಈ ಸುದ್ದಿಯನ್ನು ಶೇರ್ ಮಾಡಿ

CET01

ಬೆಂಗಳೂರು ಡಿ.12 : 2017ರ ಮೇ ತಿಂಗಳಿನಲ್ಲಿ ನಡೆಯುವ ಸಿಇಟಿ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟ ಮಾಡಿದೆ. ಮುಂದಿನ ವರ್ಷದಿಂದ ವೈದ್ಯಕೀಯ ಸೀಟುಗಳಿಗೆ ನೀಟ್ ಕಡ್ಡಾಯವಾಗಿರುವ ಕಾರಣ ವೈದ್ಯಕೀಯ ಸೀಟು ಹೊರತುಪಡಿಸಿ ಎಂಜಿನಿಯರಿಂಗ್, ಆಯುಷ್ ಹಾಗೂ ಕೃಷಿ ಎಂಜಿನಿಯರಿಂಗ್ ಸೀಟುಗಳಿಗೆ ಮಾತ್ರ ಪರೀಕ್ಷೆ ನಡೆಯಲಿದೆ.

ಮೇ 2ರಂದು ಬೆಳಗ್ಗೆ ಜೀವಶಾಸ್ತ್ರ ನಡೆದರೆ ಮಧ್ಯಾಹ್ನದ ಬಳಿಕ ಗಣಿತ ಪರೀಕ್ಷೆ ನಡೆಯಲಿದೆ. ಮೇ 3ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿದೆ. ಈ ನಾಲ್ಕು ವಿಷಯಗಳಿಗೆ 60 ಅಂಕಗಳನ್ನು ನಿಗದಿಪಡಿಸಲಾಗಿದೆ. ಬೆಳಗ್ಗೆ ನಡೆಯುವ ಪರೀಕ್ಷೆಗಳು ಬೆಳಗ್ಗೆ 10.30ರಿಂದ 11.50ರವರೆಗೆ ನಡೆದರೆ ಮಧ್ಯಾಹ್ನದ ಪರೀಕ್ಷೆಗಳು 2.30ರಿಂದ 3.50ರವರೆಗೆ ನಡೆಯಲಿದೆ.  ಹೊರ ನಾಡು, ಗಡಿನಾಡು ಕನ್ನಡಿಗರಿಗೆ 50 ಅಂಕಗಳಿಗೆ ಮಾತ್ರ ನಡೆಯುವ ಕನ್ನಡ ಭಾಷಾ ಪರೀಕ್ಷೆ ಮೇ 4ರಂದು ಬೆಳಗ್ಗೆ 11.30ರಿಂದ 12.30ರವರೆಗೆ ನಡೆಯಲಿದೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin