2019ರ ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಅಖಾಡಕ್ಕಿಳಿಯಲಿದ್ದಾರೆ ಪವನ್ ಕಲ್ಯಾಣ್

ಈ ಸುದ್ದಿಯನ್ನು ಶೇರ್ ಮಾಡಿ

Pawan-Kalyan

ವಿಜಯವಾಡ, ನ.11- ಮುಂಬರುವ ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತ ಎಂದು ತೆಲುಗಿನ ಸೂಪರ್ ಸ್ಟಾರ್ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ತಿಳಿಸಿದ್ದಾರೆ.ನಿನ್ನೆ ನಡೆದ ರ್ಯಾಲಿಯೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು ನಾನು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದು ಬಹುತೇಕ ಖಚಿತ. ಆದರೆ ಯಾವ ಕ್ಷೇತ್ರದಿಂದ ಸ್ಪರ್ಧಿ ಸಬೇಕೆಂಬ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ನುಡಿದಿದ್ದಾರೆ.

ನಾನು ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇನೋ ಇಲ್ಲ ಸೋಲು ಕಾಣುತ್ತೇನೋ, ಮತದಾರರು ನನಗೆ ಮತ ನೀಡುತ್ತಾರೋ, ಇಲ್ಲವೋ ಅದರೆ ಜನಸೇವಾ ಕಾರ್ಯಗಳನ್ನು ಮುಂದುವರೆಸುತ್ತೇನೆ ಎಂದು ಪವನ್ ಇದೇ ಸಂದರ್ಭದಲ್ಲಿ ತಿಳಿಸಿದರು. ಪವನ್ ಇತ್ತೀಚೆಗೆ ತಮ್ಮ ವಾಸ ಸ್ಥಾನವನ್ನು ಪಶ್ಚಿಮ ಗೋದಾವರಿ ಜಿಲ್ಲೆಯ ಎಲ್ಲೂರಿಗೆ ವರ್ಗಾಯಿಸಿರುವುದರಿಂದ ಈ ಕ್ಷೇತ್ರದಿಂದ ಅವರು ಸ್ಪರ್ಧಿಸಬಹುದು ಎಂದು ಹೇಳಲಾಗುತ್ತಿದೆ.

 

► Follow us on –  Facebook / Twitter  / Google+

Facebook Comments

Sri Raghav

Admin