2030ರ ವೇಳೆಗೆ ವಿಜ್ಞಾನ ಕ್ಷೇತ್ರದಲ್ಲಿ ಭಾರತ ವಿಶ್ವದ 3 ಪ್ರಮುಖ ರಾಷ್ಟ್ರಗಳಲ್ಲಿ ಒಂದಾಗಲಿವೆ : ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

MOdi-01

ತಿರುಪತಿ, ಜ.3-ವಿವಿಧ ವೈಜ್ಞಾನಿಕ ಸಂಶೋಧನೆಗಳಿಗೆ ಸಂಪೂರ್ಣ ಸಹಕಾರ ನೀಡಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿರುವ ಪ್ರಧಾನಿ ನರೇಂದ್ರ ಮೋದಿ, 2030ರ ವೇಳೆಗೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶ್ವದ ಮೂರು ಪ್ರಮುಖ ರಾಷ್ಟ್ರಗಳಲ್ಲಿ ಒಂದಾಗಲಿವೆ ಎಂದೂ ಭವಿಷ್ಯ ನುಡಿದಿದ್ದಾರೆ. ತಿರುಪತಿಯ ಶ್ರೀ ವೆಂಕಟೇಶ್ವರ ವಿಶ್ವವಿದ್ಯಾಲಯದಲ್ಲಿ ಇಂದು ಐದು ದಿನಗಳ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶ ಉದ್ಘಾಟಿಸಿ ಪ್ರಧಾನಿ ಮಾತನಾಡಿದರು. ಜನರಲ್ಲಿ ಹೆಚ್ಚುತ್ತಿರುವ ಆಶೋತ್ತರಗಳಿಗೆ ವಿಜ್ಞಾನ ಸ್ಪಂದಿಸಬೇಕು. ನಮ್ಮ ಮೂಲ ಸೌಕರ್ಯಾಭಿವೃದ್ಧಿ ಮತ್ತು ಸಮಾಜ ಕಲ್ಯಾಣ ಸಚಿವಾಲಯಗಳು ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕೆಂದು ಮೋದಿ ಕರೆ ನೀಡಿದರು.

https://youtu.be/vNCR8PvFkN0

ಜಾಗತಿಕ ಗುಣಮಟ್ಟಗಳೊಂದಿಗೆ ಮೂಲ ಸಂಶೋಧನೆಯನ್ನು ಬಲಗೊಳಿಸಲು ವೈಜ್ಞಾನಿಕ ಸಂಸ್ಥೆಗಳು ಶ್ರಮಿಸಬೇಕು. ವೈಜ್ಞಾನಿಕ ಸಾಮಾಜಿಕ ಜವಾಬ್ದಾರಿಯ ಪರಿಕಲ್ಪನೆಯನ್ನು ನಮ್ಮ ಸಂಸ್ಥೆಗಳು ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು. ನಾವು ಜಾಗತಿಕವಾಗಿ ಬೆಳೆಯುತ್ತಿದ್ದರೂ, ಸ್ಥಳೀಯ ಅಗತ್ಯತೆಗಳ ಕಡೆಗೂ ಹೆಚ್ಚಿನ ಗಮನ ಮತ್ತು ಆದ್ಯತೆ ನೀಡಬೇಕಿದೆ. ಇದರಿಂದ ಸ್ಥಳೀಯ ಉದ್ದಿಮೆಗಳು ಅಭಿವೃದ್ದಿಯಾಗುವ ಜೊತೆಗೆ ಉದ್ಯೋಗಾವಕಾಶಗಳೂ ಸೃಷ್ಟಿಯಾಗುತ್ತವೆ ಎಂದು ಮೋದಿ ಹೇಳಿದರು. ವಿಜ್ಞಾನ ಮತ್ತು ತಾಂತ್ರಿಕ ಶಿಕ್ಷಣದಲ್ಲಿ ವಿದ್ಯಾರ್ಥಿನಿಯರಿಗೂ ಸಮಾನ ಅವಕಾಶ ನೀಡಿದರೆ ಈ ಕ್ಷೇತ್ರದಲ್ಲಿ ಮತ್ತಷ್ಟು ಬೆಳವಣಿಗೆ ಸಾಧಿಸಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin