22 ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರು ಆ. 20- ದೇಶದ ಸೇನೆ ವಿರುದ್ಧ ಘೊಷಣೆಗಳನ್ನು ಕೂಗಿದ ದೇಶದ್ರೋಹಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಅಮ್ನೆಸ್ಟಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದ 22 ಎಬಿವಿಪಿ ಕಾರ್ಯಕರ್ತರ ವಿರುದ್ಧ ಇಂದಿರಾನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ನಿನ್ನೆ ಬೆಳಗ್ಗೆ ಅಮ್ನೆಸ್ಟಿ ಕಚೇರಿಗೆ ಮತ್ತಿಗೆ ಹಾಕಲು ಯತ್ನಿಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಇದರಿಂದ ಪ್ರತಿಭಟನೆ ತಾರಕಕ್ಕೆ ಏರಿತ್ತು. ಈ ಹಿನ್ನೆಲೆಯಲ್ಲಿ ಲಾಠಿ ಏಟು ತಿಂದ ವಿದ್ಯಾರ್ಥಿಗಳ ವಿರುದ್ಧವೇ ಇಂದಿರಾನಗರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ( ಐಪಿಸಿ 353), ಕಾನೂನು ಬಾಹಿರ ಸಭೆ (ಐಪಿಸಿ 143,144 ಮತ್ತು 149), ಸಾರ್ವಜನಿಕ ಆಸ್ತಿಗೆ ಹಾನಿ(ಐಪಿಸಿ 427), ಬೆಂಕಿ ಹಚ್ಚಿ ಕಿಡಿಗೇಡಿತನದ ಕೃತ್ಯ(ಐಪಿಸಿ435), ಅಪರಾಧವೆಸಗಲು ಮುಂದಾದ ಆರೋಪ(ಐಪಿಸಿ 511) ದಡಿಯಲ್ಲಿ 22 ಜನರ ವಿರುದ್ಧ ಪ್ರಕರಣ ದಾಖಲಿಸಿ ನಂತರ ಬೇಲ್ ಮೇಲೆ ಬಿಡುಗಡೆ ಮಾಡಿದ್ದಾರೆ.
► Follow us on – Facebook / Twitter / Google+