ಗುಜರಾತಿನಲ್ಲಿ ಕಳ್ಳಭಟ್ಟಿ ಸೇವಿಸಿ 22 ಮಂದಿ ಬಲಿ..!

ಈ ಸುದ್ದಿಯನ್ನು ಶೇರ್ ಮಾಡಿ

ಅಲಿಘರ್,ಮೇ.29-ಗುಜರಾತಿನಲ್ಲಿ ಕಳ್ಳಭಟ್ಟಿ ಸೇವಿಸಿ 22 ಮಂದಿಮೃತಪಟ್ಟಿದ್ದಾರೆ. ಇತರ 28 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಕಳ್ಳಭಟ್ಟಿ ಸೇವಿಸಿ ಅಸ್ವಸ್ಥಗೊಂಡವರನ್ನು ಅಲಿಘರ್ ಸಮೀಪದ ಮಲ್ಕಾನ್‍ಸಿಂಗ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಇನ್ನು ಕೆಲವರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿನ್ನೆ ರಾತ್ರಿ ಲೋಧಾ,ಕೈರ್ ಹಾಗೂ ಜವಾನ್ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಳ್ಳಭಟ್ಟಿ ಸೇವಿಸಿ 15 ಮಂದಿ ಸಾವನ್ನಪ್ಪಿದ್ದರು. ಇಂದು ಮುಂಜಾನೆ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಸುತ್ತಮುತ್ತಿಲಿನ ಮತ್ತಷ್ಟು ಗ್ರಾಮಸ್ಥರು ಕಳ್ಳಭಟ್ಟಿ ಸೇವಿಸಿರುವ ಸಾಧ್ಯತೆ ಇದ್ದು ಇನ್ನು ಹಲವಾರು ಮಂದಿ ಸಾವಿಗೀಡಾಗುವ ಸಾಧ್ಯತೆಗಳಿವೆ ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಧಾನ್ ಜೈಸ್ವಾಲ್ ತಿಳಿಸಿದ್ದಾರೆ.

ಕಳ್ಳಭಟ್ಟಿ ಕಿಂಗ್‍ಪಿನ್ ಅನಿಲ್ ಚೌಧರಿ ಸೇರಿದಂತೆ ಐದು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

ಚೌಧರಿ ಸಹಚರರಾದ ರಿಷಿ ಶರ್ಮ ಹಾಗೂ ವಿಪಿನ್ ಯಾದವ್ ಅವರ ಬಗ್ಗೆ ಸುಳಿವು ನೀಡಿದವರಿಗೆ 50 ಸಾವಿರ ರೂ.ಗಳ ಬಹುಮಾನ ಘೋಷಿಸಲಾಗಿದೆ ಎಂದು ಎಸ್‍ಎಸ್‍ಪಿ ಕಲಾನಿಧಿ ನೈಥಾನಿ ತಿಳಿಸಿದ್ದಾರೆ.

Facebook Comments

Sri Raghav

Admin