224 ಕ್ಷೇತ್ರದಲ್ಲೂ ಬಿಎಸ್‍ಪಿ ಸ್ಪರ್ಧೆ

ಈ ಸುದ್ದಿಯನ್ನು ಶೇರ್ ಮಾಡಿ

beluru
ಬೇಲೂರು, ಅ.14- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲೂ ಬಿಎಸ್‍ಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಯಾವ ಪಕ್ಷದೊಂದಿಗೂ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್‍ಪಿ ರಾಜ್ಯಾಧ್ಯಕ್ಷ ಎನ್.ಮಹೇಶ್ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಕಾರ್ಯಕರ್ತರ ಸಭೆಗೂ ಮುನ್ನ ಮಾತನಾಡಿದ ಅವರು, 2018ರ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸದೃಢವಾಗಿಸುವ ನಿಟ್ಟಿನಲ್ಲಿ ಪಂಚಾಯಿತಿ ಹಾಗೂ ಬೂತ್‍ಮಟ್ಟದಲ್ಲಿ ಪದಾಧಿಕಾರಿಗಳನ್ನು ನೇಮಿಸುತ್ತಿದ್ದು, ಇದಕ್ಕಾಗಿ ರಾಜ್ಯಾದ್ಯಂತ ಸಂಚರಿಸಿ ಕಾರ್ಯಕರ್ತರ ಸಭೆ ನಡೆಸಲಾಗುತ್ತಿದೆ.

ನ.26ರಂದು ಬಿಎಸ್‍ಪಿ ರಾಷ್ಟೀಯ ಅಧ್ಯಕ್ಷೆ ಮಾಯವತಿಯವರು ಬೆಂಗಳೂರಿಗೆ ಆಗಮಿಸಲಿದ್ದು, ಅದೇ ದಿನ 25 ಸಾವಿರ ಪದಾಧಿಕಾರಿಗಳಿಗೆ ತರಬೇತಿ ನಿಡಲಿದ್ದಾರೆ. ಅಲ್ಲದೆ, 2018ರ ವಿಧಾನಸಭಾ ಚುನಾವಣೆಯಲ್ಲಿ 33 ಕ್ಷೇತ್ರಗಳಲ್ಲಿ ಬಿಎಸ್‍ಪಿ ಪ್ರಬಲ ಪೈಪೋಟಿ ನೀಡಲಿದ್ದು, ಶೇ.10ರಷ್ಟು ಸ್ಥಾನಗಳನ್ನು ನಾವು ಗೆಲ್ಲುತ್ತೇವೆ ಹಾಗೂ ಮುಂದಿನ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಬರದೆ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದ್ದು, ಬಿಎಸ್‍ಪಿ ಪಕ್ಷವು ಕಿಂಗ್ ಮೇಕರ್ ಅಗಲಿದೆ ಎಂದರು. ರಾಜ್ಯ ಸಮಿತಿ ಸದಸ್ಯರಾದ ಗಂಗಾಧರ್ ಬಹುಜನ್, ಶಿವಮ್ಮ, ಜಿಲ್ಲಾ ಉಪಾಧ್ಯಕ್ಷ ಲಕ್ಷ್ಮಣ್‍ಕೀರ್ತಿ, ತಾಲೂಕು ಅಧ್ಯಕ್ಷ ಯೋಗೀಶ್, ತಾಲೂಕು ಸಂಯೋಜಕ ರಾಜು ಇನ್ನಿತರರಿದ್ದರು.

Facebook Comments

Sri Raghav

Admin