23ರಂದು ವಿದುರಾಶ್ವತ್ಥಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಈ ಸುದ್ದಿಯನ್ನು ಶೇರ್ ಮಾಡಿ

smruti

ಗೌರಿಬಿದನೂರು, ಆ.21- ತಿರಂಗ ಯಾತ್ರೆ ಅಂಗವಾಗಿ ವಿದುರಾಶ್ವತ್ಥದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪಾಲ್ಗೊಳ್ಳಲಿದ್ದಾರೆ. ಇದೇ 23ರಂದು ಮಂಗಳವಾರ ಸಭೆ ಆಯೋಜಿಸಲಾಗಿದ್ದು, ಅಂದು ಮಧ್ಯಾಹ್ನ 1.30ಕ್ಕೆ ನಡೆಯುವ ಸಭೆಯಲ್ಲಿ ಸ್ಮೃತಿ ಇರಾನಿ ಭಾಗವಹಿಸುವರು. ರಾಜ್ಯಾದ್ಯಂತ ಬಿಜೆಪಿ ನಡೆಸುತ್ತಿರುವ ತಿರಂಗ ಯಾತ್ರೆ ಅಂಗವಾಗಿ ಕಾರ್ಯಕ್ರಮ ಆಯೋಜಿಸಿದ್ದು, ಸ್ವತಂತ್ರಕ್ಕಾಗಿ ವಿದುರಾಶ್ವತ್ಥದಲ್ಲಿ ನಡೆದ ಹೋರಾಟದ ಸ್ಮರಣೆ ಹಿನ್ನೆಲೆಯಲ್ಲಿ ಸಭೆ ಹೆಚ್ಚಿನ ಮಹತ್ವ ಪಡೆದಿದೆ.  ಇದೇ ರೀತಿ ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ತಿರಂಗ ಯಾತ್ರೆಯಲ್ಲಿ ಬಿಜೆಪಿಯ ಹಲ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

Facebook Comments

Sri Raghav

Admin