ರಾಜ್ಯದಲ್ಲಿಂದು 44438 ಮಂದಿಗೆ ಕೊರೋನಾ, 239 ಸಾವು..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆ ಆರಂಭ ಮುಂದುವರೆದಿದ್ದು ಇಂದು 44438 ಜನರಲ್ಲಿ ಸೋಂಕು ಪತ್ತೆಯಾಗಿದೆ. ಮಹಾಮಾರಿಗೆ ಇಂದು 239 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1646303 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 16250ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 22112 ಜನರಿಗೆ ಕೊರೋನಾ ತಗುಲಿದ್ದು, 115 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 819404 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ 6716 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 20901 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 1185299 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಉಳಿದಂತೆ 444734 ಸಕ್ರಿಯ ಕೇಸ್​ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ.

Facebook Comments

Sri Raghav

Admin