24 ಗಂಟೆಗಳಲ್ಲಿ ಇಡೀ ರಾಜ್ಯವನ್ನು ವ್ಯಾಪಿಸಲಿರುವ ನೈರುತ್ಯ ಮುಂಗಾರು, ಭಾರಿ ಮಳೆ ಸಾಧ್ಯತೆ
ಬೆಂಗಳೂರು, ಜೂ.9-ಒಂದು ವಾರದ ವಿಳಂಬದ ನಂತರ ನೈರುತ್ಯ ಮುಂಗಾರು ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡನ್ನು ಪ್ರವೇಶಿಸಿದ್ದು, ಮುಂದಿನ 24 ಗಂಟೆಗಳಲ್ಲಿ ಇಡೀ ರಾಜ್ಯವನ್ನು ವ್ಯಾಪಿಸಲಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಕೇಂದ್ರ ತಿಳಿಸಿದೆ.
ಬುಧವಾರ ಮತ್ತು ಗುರುವಾರ ಮುಂಜಾನೆ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಾದ ನಂತರ ಮುಂಗಾರು ಚುರುಕುಗೊಂಡಿರುವುದನ್ನು ಬೆಂಗಳೂರು ಹವಾಮಾನ ಕೇಂದ್ರ ಖಚಿತಪಡಿಸಿದೆ.
ಗುರುವಾರ ರಾಜ್ಯ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಿದೆ ಎಂದು ನಗರದ ಭಾರತೀಯ ಹವಾಮಾನ ಕೇಂದ್ರದ ನಿರ್ದೇಶಕ ಎಂ. ಸುಂದರ್ ಮೆತ್ರಿ ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಶುಕ್ರವಾರದಿಂದ ಮೋಡ ಕವಿದ ವಾತಾವರಣವಿದ್ದು, ಹಗುರ ಮಳೆಯಾಗಲಿದೆ. ಈವರೆಗೆ ಸಾಮಾನ್ಯ ಪ್ರಮಾಣದ ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಜಿ.ಎಸ್.ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS