240 ಕಿರಿಯ ಆರೋಗ್ಯ ನಿರೀಕ್ಷಕರ ಹುದ್ದೆಗಳ ನೇಮಕಕ್ಕೆ ಕೆಪಿಎಸ್‍ಸಿಗೆ ಪ್ರಸ್ತಾವನೆ

ಈ ಸುದ್ದಿಯನ್ನು ಶೇರ್ ಮಾಡಿ

Yogishwar-Khandre

ಬೆಂಗಳೂರು, ಮಾ.28- ಪಟ್ಟಣ ಪಂಚಾಯಿತಿ ಸೇರಿದಂತೆ ನಗರ, ಸ್ಥಳೀಯ ಪ್ರದೇಶಗಳಲ್ಲಿ ಖಾಲಿ ಇರುವ 240 ಕಿರಿಯ ಆರೋಗ್ಯ ನಿರೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ) ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪೌರಾಡಳಿತ ಸಚಿವ ಈಶ್ವರ ಬಿ.ಖಂಡ್ರೆ ವಿಧಾನ ಪರಿಷತ್‍ನಲ್ಲಿ ಹೇಳಿದರು.  ಪ್ರಶ್ನೋತ್ತರ ಕಲಾಪದಲ್ಲಿ ಶ್ರೀನಿವಾಸ್ ಮಾನೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಿರಿಯ ಆರೋಗ್ಯ ನಿರೀಕ್ಷಕರ ಹುದ್ದೆಗಳ ನೇಮಕಾತಿ ಸದ್ಯದಲ್ಲೇ ನಡೆಯಲಿದೆ. ಪ್ರತಿ ಪಟ್ಟಣ ಪಂಚಾಯಿತಿಗೆ 1ಹುದ್ದೆಯಂತೆ 89 ಹುದ್ದೆಗಳು ಮಂಜೂರಾಗಿವೆ. ಹೊರಗುತ್ತಿಗೆ ಮೂಲಕ ಕಿರಿಯ ಆರೋಗ್ಯ ನಿರೀಕ್ಷಕರ ಹುದ್ದೆಗಳ ನೇಮಕ ಮಾಡಲು ಅವಕಾಶವಿಲ್ಲ ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin