BREAKING : ರಾಜ್ಯದಲ್ಲಿಂದು 40990 ಮಂದಿಗೆ ಕೊರೋನಾ, 271 ಜೀವಗಳು ಬಲಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ನಾಗಾಲೋಟ ಮುಂದುವರೆದಿದ್ದು ರಾಜ್ಯಾದ್ಯಂತ ಇಂದು ಬರೋಬ್ಬರಿ 40990 ಮಂದಿಯಲ್ಲಿ ಕೊರೋನಾ ಪತ್ತೆಯಾಗಿದ್ದು ಇಂದು 271 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1564132 ಕ್ಕೇರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 15794ಕ್ಕೆ ಏರಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 19353 ಜನರಿಗೆ ಕೊರೋನಾ ತಗುಲಿದ್ದು, 162 ಮಂದಿ ಪ್ರಾಣ ಬಿಟ್ಟಿದ್ದಾರೆ. ಮಹಾನಗಿರಿಯೊಂದರಲ್ಲೇ ಈವರೆಗೆ 776093 ಮಂದಿಗೆ ಕೊರೋನಾ ತಗುಲಿದೆ. ಬೆಂಗಳೂರಲ್ಲಿ ಈವರೆಗೆ 6537 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

ಇಂದು 18341 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 1143250 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಉಳಿದಂತೆ 405068 ಸಕ್ರಿಯ ಕೇಸ್​ಗಳಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ.

Facebook Comments

Sri Raghav

Admin