ಧಾರವಾಡ SDM ಕಾಲೇಜಿನಲ್ಲಿ ಕೊರೋನಾರ್ಭಟ : ಸೋಂಕಿತರ ಸಂಖ್ಯೆ 282ಕ್ಕೆ ಏರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಧಾರವಾಡ, ನ.27- ಇಲ್ಲಿನ ಎಸ್‍ಡಿಎಂ ಕಾಲೇಜಿನಲ್ಲಿ ಮತ್ತೆ 77 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸೋಂಕಿತರ ಸಂಖ್ಯೆ 282ಕ್ಕೆ ಏರಿಕೆಯಾಗಿದ್ದು, ಕಾಲೇಜು ಹಾಸ್ಟೆಲ್‍ಅನ್ನು ಸದ್ಯ ಸೀಲ್‍ಡೌನ್ ಮಾಡಲಾಗಿದೆ. ಮೊನ್ನೆಯಷ್ಟೆ 66 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ನಿನ್ನೆ 161 ಜನರಲ್ಲಿ ಸೋಂಕು ಕಂಡುಬಂದಿತ್ತು. ಇಂದು 77 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿರುವುದು ಪೋಷಕರಲ್ಲಿ ಆತಂಕ ಉಂಟುಮಾಡಿದೆ.

ಈ ಸೋಂಕು ಅಷ್ಟು ಪರಿಣಾಮಕಾರಿಯಾಗಿಲ್ಲ. ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡಲಾಗುತ್ತಿದೆ. ಸೋಂಕಿತ ಸಂಪರ್ಕಿತರನ್ನು ಕ್ವಾರಂಟೈನ್‍ನಲ್ಲಿಡಲಾಗಿದೆ. ಯಾರೂ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಜಿಲ್ಲಾಕಾರಿಗಳು ತಿಳಿಸಿದ್ದಾರೆ.

ಆದರೆ, ಪೋಷಕರಲ್ಲಿ ಮನೆ ಮಾಡಿರುವ ಆತಂಕ ಮಾತ್ರ ದೂರವಾಗಿಲ್ಲ. ಧಾರವಾಡ ಮೆಡಿಕಲ್ ಕಾಲೇಜಿನಲ್ಲಿ ಕೊರೊನಾ ಸೋಟವಾಗುತ್ತಿದ್ದಂತೆ ಶಿಕ್ಷಣ ಸಂಸ್ಥೆಗಳು ಎಚ್ಚೆತ್ತುಕೊಂಡಿವೆ. ಕೊರೊನಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜನ ಮೈಮರೆಯಬಾರದು ಎಂಬ ಸೂಚನೆ ರವಾನಿಸಲಾಗಿದೆ.

ಈಗಾಗಲೇ ಕೊರೊನಾ ದಿನದಿಂದ ದಿನಕ್ಕೆ ಕ್ಷೀಣಿಸಿದ್ದು, ಜನ ನಿರಾಳರಾಗಿದ್ದರು. ಆದರೆ, ಧಾರವಾಡದ ಮೆಡಿಕಲ್ ಕಾಲೇಜಿನ ಗೆಟ್ ಟುಗೆದರ್‍ನಲ್ಲಿ ಪಾಲ್ಗೊಂಡಿದ್ದ 282ಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿರುವುದು ಸಹಜವಾಗಿಯೇ ಆತಂಕಕ್ಕೆ ಈಡುಮಾಡಿದೆ.

ಕಾಲೇಜಿನ ಎಲ್ಲ ವಿದ್ಯಾರ್ಥಿಗಳನ್ನೂ ತಪಾಸಣೆಗೆ ಒಳಪಡಿಸಲಾಗಿದೆ. ಅಲ್ಲದೆ, ವಿವಿಧೆಡೆ ತಪಾಸಣೆಯನ್ನು ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಲ್ಲಿ ಸ್ಯಾನಿಟೈಜ್ ಮಾಡಲಾಗುತ್ತಿದೆ.

Facebook Comments